ಹಾಸನ: ಕಾಡಾನೆ ದಾಳಿಗೆ ಯುವಕ ಬಲಿ

Update: 2025-02-24 23:10 IST
ಹಾಸನ: ಕಾಡಾನೆ ದಾಳಿಗೆ ಯುವಕ ಬಲಿ
  • whatsapp icon

ಬೇಲೂರು: ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಬ್ಯಾದನೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಯುವಕ ಬಲಿಯಾದ ಘಟನೆ ನಡೆದಿದೆ.

ಮೃತರನ್ನು ಗುಜನಹಳ್ಳಿ ಗ್ರಾಮದ ಅನಿಲ್ (28) ಎಂದು ಗುರುತಿಸಲಾಗಿದೆ. ಅವರು ಅಣ್ಣಮಲೈ ಎಸ್ಟೇಟ್‌ನಲ್ಲಿ ಕೆಲಸ ಮಾಡುತ್ತಿದ್ದರೆಂದು ತಿಳಿದು ಬಂದಿದೆ.

ಮಂಗಳವಾರ ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಕಾಡಾನೆ ಅವರ ಮೇಲೆ ದಾಳಿ ಮಾಡಿದೆ. ಆನೆ ಸೊಂಡಿಲಿನಿಂದ ಎತ್ತಿ ಬಿಸಾಡಿ, ನಂತರ ತುಳಿದು ಯುವಕನನ್ನು ಸಾಯಿಸಿದೆ.

ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಗ್ರಾಮಸ್ಥರು ಧಾವಿಸಿದ್ದು, ಮೃತ ಯುವಕನ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಘಟನೆಯ ಬಗ್ಗೆ ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News