ಪ್ರಜ್ವಲ್‌ ರೇವಣ್ಣ ಪ್ರಕರಣ | ಪೆನ್‌ಡ್ರೈವ್‌ ರೆಡಿ ಮಾಡಿಸಿದ್ದೇ ಡಿ.ಕೆ.ಶಿವಕುಮಾರ್‌ : ದೇವರಾಜೇಗೌಡ ಆರೋಪ

Update: 2024-05-17 15:36 GMT

Photo : x/@JanataDal_S

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅ‍‍ಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಅನ್ನು ರೆಡಿ ಮಾಡಿಸಿದ್ದೇ ಡಿಸಿಎಂ ಡಿ.ಕೆ.ಶಿವಕುಮಾರ್‌ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪ ಮಾಡಿದ್ದಾರೆ.

ಇಂದು ಹಾಸನದ ಕೋರ್ಟ್‌ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ನನ್ನನ್ನು ಕರೆಸಿ ಮಾತನಾಡಿದ್ದರು. ಪೆನ್‌ಡ್ರೈವ್‌ ವನ್ನು ಎಚ್‌.ಡಿ.ಕುಮಾರಸ್ವಾಮಿ ಹಂಚಿದರು ಎಂದು ಹೇಳು. ನಿನಗೆ ಸಮಸ್ಯೆ ಆಗಲ್ಲ ಎಂದು ನನಗೆ ಭರವಸೆ ನೀಡಿದ್ದರು. ಅಲ್ಲದೆ, ಇದಕ್ಕೆ100 ಕೋಟಿ ರೂ ಹಣದ ಆಫರ್ ಕೊಟ್ಟರು. ಐದು ಕೋಟಿ ರೂ. ಅಡ್ವಾನ್ಸ್ ದುಡ್ಡನ್ನು ಬೌರಿಂಗ್ ಕ್ಲಬ್‌ನ 110 ರೂಂಗೆ ಕಳುಹಿಸಿದ್ದರು" ಎಂದು ಆರೋಪಿಸಿದರು.

ಡಿ.ಕೆ.ಶಿವಕುಮಾರ್ ಅವರು ಕಾರ್ತಿಕ್ ನನ್ನು ಕರೆಸಿಕೊಂಡು ಸಂಪೂರ್ಣ ಮಾಹಿತಿ ಪಡೆದು ಪೆನ್‌ಡ್ರೈವ್ ರೆಡಿ ಮಾಡಿಸಿದ್ದರು. ಅಲ್ಲದೆ, ಶಿವಕುಮಾರ್ ಅವರು ನಾಲ್ಕು ಜನ ಮಂತ್ರಿಗಳ ಕಮಿಟಿ ಮಾಡಿದ್ದರು. ಚೆಲುವರಾಯಸ್ವಾಮಿ, ಕೃಷ್ಣಭೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತು ಇನ್ನೊಬ್ಬ ಸಚಿವರು. ನಾಲ್ಕು ಮಂತ್ರಿಗಳ ತಂಡ ರಚನೆ ಮಾಡಿ ಇದನ್ನು ಹ್ಯಾಂಡಲ್ ಮಾಡಲು ಬಿಟ್ಟಿದ್ದರು ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News