ಮಹಾರ್ ಯೋಧರ ತ್ಯಾಗ ಬಲಿದಾನವನ್ನು ವ್ಯರ್ಥವಾಗಲು ಬಿಡಬಾರದು : ಜ್ಞಾನಪ್ರಕಾಶ್ ಸ್ವಾಮಿಜಿ
ಸಕಲೇಶಪುರ : ಮಹಾರ್ ಯೋಧರ ತ್ಯಾಗ ಬಲಿದಾನವನ್ನು ವ್ಯರ್ಥವಾಗಲು ಬಿಡಬಾರದು ಎಂದು ಉರಿಲಿಂಗಪೆದ್ದಿಮಠದ ಶ್ರೀ ಜ್ಞಾನಪ್ರಕಾಶ್ ಸ್ವಾಮಿಜಿ ಹೇಳಿದರು.
ಬುದುವಾರ ಪಟ್ಟಣದ ಹಳೇ ತಾಲೂಕು ಕಚೇರಿ ಅವರಣದಲ್ಲಿ ಪರಿಶಿಷ್ಟ ಜಾತಿ-ವರ್ಗಗಳ ಒಕ್ಕೂಟ ಹಾಗೂ ಬೀಮ ಕೋರೇಗಾಂವ್ ವಿಜಯೋತ್ಸವ ಸಮಿತಿ ಹಮ್ಮಿಕೊಂಡಿದ್ದ ಬೀಮ ಕೋರೆಗಾಂವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ, ಮಹಾರ್ ಸೈನಿಕರ ಸಮಾನತೆಯ ಕನಸು ನನಸಾಗಿಸುವುದು ನಮ್ಮ ಗುರಿಯಾಗಬೇಕು’ ಎಂದು ಹೇಳಿದರು.
ಬಾಬಾಸಾಹೇಬ್ ಅಂಬೇಡ್ಕರ್ ಅವರು ಪ್ರತಿ ವರ್ಷ ಭೀಮಾ ಕೋರೆಗಾಂವ್‌ಗೆ ಭೇಟಿ ನೀಡಿ ಹುತಾತ್ಮರ ಸ್ಮರಣಾರ್ಥ ಬ್ರಿಟಿಷ್ ಸರ್ಕಾರ ನಿರ್ಮಿಸಿರುವ ವೀರ ಯೋಧರ ಸ್ಮಾರಕಕ್ಕೆ ಗೌರವ ಸಲ್ಲಿಸುತ್ತಿದ್ದರು.
"ಪೇಶ್ವೆಗಳು ಜಾತಿ ವ್ಯವಸ್ಥೆಯಡಿ ಆಡಳಿತ ನಡೆಸುತ್ತಿದ್ದರು. ಪೇಶ್ವೆ ಬಾಜಿರಾಯನನ್ನು ಸೋಲಿಸಲು ಬಂದ ಬ್ರಿಟಿಷರು ಮಹಾರ್ ಯೋಧರ ನೆರವು ಕೋರಿದ್ದರು. ಆದರೆ, ಮಹಾರ್ ಯೋಧರು ಪೇಶ್ವೆಗೆ ಷರತ್ತಿನ ಬೆಂಬಲ ನೀಡಲು ಆತನ ಬಳಿಗೆ ತನ್ನ ದಂಡನಾಯಕ ಸಿದ್ಧನಾಯಕನನ್ನು ಕಳಿಸಿದರು" ಎಂದು ಹೇಳಿದರು.
ಬಾಜಿರಾಯ ಬ್ರಾಹ್ಮಣ ಸಂಪ್ರದಾಯ ಪಾಲಿಸುವುದೇ ತನ್ನ ಧರ್ಮ ಎಂದು ಹೇಳಿ, ಅಸ್ಪೃಶ್ಯ ಯೋಧರ ಬೆಂಬಲ ತಿರಿಸ್ಕರಿಸಿ, ಸಿದ್ಧನಾಯಕನನ್ನು ಅಪಮಾನಿಸಿ ಕಳಿಸುತ್ತಾನೆ. ಇದರಿಂದ ಆಕ್ರೋಶಗೊಂಡ ಮಹಾರ್ ಯೋಧರು ಬಾಜಿರಾಯನ ಸೊಕ್ಕು ಅಡಗಿಸಲು ಬ್ರಿಟಿಷರ ಪರ ಯುದ್ಧ ಮಾಡಲು ಒಪ್ಪಿಕೊಳ್ಳುತ್ತಾರೆ ಎಂದು ತಿಳಿಸಿದರು.
ಚಿಂತಕ ವಿಠಲ್ ವಗ್ಗಲ್ ಮಾತನಾಡಿ, 1818ರ ಜ.1 ರಂದು ಈಗಿನ ಪುಣೆ ಹತ್ತಿರದ ಭೀಮಾ ನದಿ ದಂಡೆ ಮೇಲಿನ ಕೋರೆಗಾಂವ್ ಬಳಿ 30 ಸಾವಿರ ಸೈನಿಕರಿದ್ದ ಪೇಶ್ವೆ ಹಾಗೂ 500 ಮಹಾರ್ ಯೋಧರ ಮಧ್ಯೆ ಯುದ್ಧ ನಡೆದು ಬ್ರಿಟಿಷರ ಕೊರಳಿಗೆ ವಿಜಯ ಮಾಲೆ ಬಿದ್ದಿತು ಎಂದು ಹೇಳಿದರು.
ದಲಿತ ಸೈನಿಕರ ಇಂತಹ ವೀರ ಹೋರಾಟವನ್ನು ಪ್ರತಿಯೊಬ್ಬ ದಲಿತ ಯುವಕರು ತಿಳಿದುಕೊಳ್ಳುವ ಅಗತ್ಯವಿದೆ ಎಂದರು.
ಬೆಂಗಳೂರಿನ ಧರ್ಮ ಧಸ್ಸಿಮ್ ಬುದ್ದ ವಿಹಾರದ ಮೈತ್ರಿ ಮಾತಾಜಿ ಬಿಕ್ಕುಣಿ ಕಾರ್ಯಕ್ರಮ ಉದ್ಘಾಟಿಸಿದರು.
ವೇದಿಕೆಯಲ್ಲಿ ವಿಜಯೋತ್ಸವ ಸಮಿತಿ ಅಧ್ಯಕ್ಷ ನಲ್ಲುಲ್ಲಿ ಈರಯ್ಯ, ಅಂಬೇಡ್ಕರ್ ವಾದಿ ಮಹಾದೇವ್ ಭೀಮರಾಯ್ ಸಿದಗೋಳಿ, ಪುರಸಭೆ ಮಾಜಿ ಅಧ್ಯಕ್ಷ ಕಾಡಪ್ಪ ಉಪಸ್ಥಿತರಿದ್ದರು.
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಪಟ್ಟಣದ ಮುಖ್ಯಬೀದಿಯಲ್ಲಿ ಬೀಮಾಕೊರೇಗಾಂವ್ ಪ್ರತಿಕೃತಿಯ ಮೇರವಣಿಗೆ ನಡೆಸಲಾಯಿತು.
ಭೀಮ್ ಕೋರೆಗಾವ್ ವಿಜಯೋತ್ಸವ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ ಹೆಚ್ಎಂ ವಿಶ್ವನಾಥ್ ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್ ಸ್ವಾಮಿ, ಪುರಸಭೆ ಮಾಜಿ ಅಧ್ಯಕ್ಷ ಸಯ್ಯದ್ ಮುಫೀಜ್, ಕಾಂಗ್ರೆಸ್ ಮುಖಂಡ ಉದಯ, ಆನೆಮಹಾಲ್ ಹಸೈನಾರ್, ಮಹಮದ್ ಹನೀಫ್, ರಾದಕೃಷ್ಟ, ವಿವಿದ ದಲಿತ ಸಂಘಟನೆಯ ಮುಖಂಡರು ಇದ್ದರು.