ಸಕಲೇಶಪುರ | ವಿದ್ಯುತ್ ತಂತಿಗೆ ಸೊಂಡಿಲು ತಗುಲಿ ಕಾಡಾನೆ ಸಾವು

Update: 2024-10-17 04:05 GMT

ಸಕಲೇಶಪುರ: ತಾಲೂಕಿನ ಬಾಳ್ಳುಪೇಟೆ ಸಮೀಪ ಕಾಡಾನೆಯೊಂದು ಸಾವನ್ನಪ್ಪಿರುವ ಘಟನೆ ನೆಡೆದಿದೆ.

ಇಲ್ಲಿನ ಬನವಾಸೆ ಗ್ರಾಮದ ಬಳಿ ಬಿಎಸ್ಸೆನ್ನೆಲ್ ಕಚೇರಿ ಸಮೀಪ ವಿದ್ಯುತ್ ಕಂಬದ ಪಕ್ಕದಲ್ಲಿ ಸುಮಾರು 25 ವರ್ಷದ ಕಾಡಾನೆ ಮೃತಪಟ್ಟಿದೆ. ವಿದ್ಯುತ್ ತಂತಿಗೆ ಆನೆಯ ಸೊಂಡಿಲು ಆಕಸ್ಮಿಕವಾಗಿ ತಗುಲಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿದೆ.

ಆನೆಯು ವಿದ್ಯುತ್ ಪ್ರವಹಿಸಿದ್ದರಿಂದ ಮೃತಪಟ್ಟಿರುವಂತೆ ತೋರುತ್ತಿದ್ದು, ಆನೆ ಸಾವನ್ನಪ್ಪಿರುವ ಸ್ಥಳದಲ್ಲಿ ವಿದ್ಯುತ್ ತಂತಿ ಹಾದು ಹೋಗಿದೆ. ಆನೆಯ ಮರಣೋತ್ತರ ಪರೀಕ್ಷೆಯ ನಂತರ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ವಲಯ ಅರಣ್ಯ ಅಧಿಕಾರಿ ಹೇಮಂತ್ ತಿಳಿಸಿದ್ದಾರೆ.

Full View

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News