ಸಕಲೇಶಪುರ | ಸರಕು ಸಾಗಾಟದ ಲಾರಿ ಪಲ್ಟಿ: ಮೂವರಿಗೆ ಗಾಯ

Update: 2024-08-22 06:43 GMT

ಹಾಸನ, ಆ.22: ಸರಕು ತುಂಬಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿದ ಕಂದಕಕ್ಕೆ ಉರುಳಿ ಬಿದ್ದು, ಚಾಲಕ ಸಹಿತ ಮೂವರು ಗಾಯಗೊಂಡಿರುವ ಘಟನೆ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ ಬುಧವಾರ ತಡರಾತ್ರಿ ನಡೆದಿದೆ.

ಕೆಲ ದಿನಗಳ ಹಿಂದೆ ಸುರಿದ ಭಾರೀ ಮಳೆಯಿಂದ ರಸ್ತೆಯ ಪಕ್ಕದಲ್ಲೇ ರಭಸವಾಗಿ ನೀರು ಹರಿದು ದೊಡ್ಡ ಗುಂಡಿ ಸೃಷ್ಟಿಯಾಗಿತ್ತು. ತಡರಾತ್ರಿ ತಿರುವಿನಲ್ಲಿ ಲಾರಿ, ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಲಾರಿ ಪಲ್ಟಿಯಾಗಿದೆ.

ಮಾಹಿತಿ ತಿಳಿದು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿದ್ದು ಲಾರಿಯಲ್ಲಿ ಸಿಲುಕಿಕೊಂಡಿದ್ದ ಕುಣಿಗಲ್ ಮೂಲದ ಲಾರಿ ಚಾಲಕ ಜಾಫರ್, ಸಿಮ್ರಾನ್ ಮತ್ತು ಅಥಾವುಲ್ಲರನ್ನು ರಕ್ಷಿಸಿದ್ದಾರೆ. ಗಾಯಾಳುಗಳು ಸಕಲೇಶಪುರ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಬಗ್ಗೆ ಸಕಲೇಶಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News