ಸಕಲೇಶಪುರ: ಚಲಿಸುತ್ತಿದ್ದ ಓಮ್ನಿ ಮೇಲೆ ಮಣ್ಣು ಕುಸಿತ; ಅಪಾಯದಿಂದ ಪಾರಾದ ಪ್ರಯಾಣಿಕರು
ಹಾಸನ: ಚಲಿಸುತ್ತಿದ್ದ ಓಮ್ನಿ ಕಾರಿನ ಮೇಲೆ ಏಕಾಏಕಿ ಗುಡ್ಡ ಕುಸಿದ ಪರಿಣಾಮ ಕಾರು ಮಣ್ಣಿನಡಿ ಸಿಲುಕಿದ ಘಟನೆ ಸಕಲೇಶಪುರ ತಾಲ್ಲೂಕಿನ, ದೊಡ್ಡತಪ್ಲು ಬಳಿ ಗುರುವಾರ ನಡೆದಿದೆ.
ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಕಂದಾಯ ಇಲಾಖೆ ಸಿಬ್ಬಂದಿ ಮಣ್ಣು ತೆರವುಗೊಳಿಸಿ ಪ್ರಯಾಣಿಕರನ್ನು ರಕ್ಷಿಸಿದ್ದಾರೆ.
ಘಟನೆ ನಡೆದ ಸ್ಥಳ ದಿಂದ ಎರಡೂ ಕಡೆಗೆ ಐದು ಐದು ಕಿಲೋಮೀಟರ್ ಟ್ರಾಫಿಕ್ ಜಾಮ್ ಉಂಟಾಗಿದ್ದು, ಬದಲಿ ರಸ್ತೆಯ ಮೂಲಕ ಪೊಲೀಸರು ವಾಹನ ಸಂಚಾರಕ್ಕೆ ಅವಕಾಶ ಮಾಡಿ ಕೊಟ್ಟಿದ್ದಾರೆ.
ಭಾರೀ ಮಳೆಗೆ ಭೂಕುಸಿತ; ಶಿರಾಡಿ ಘಾಟ್ ನಲ್ಲಿ ಸಂಚಾರ ಸ್ಥಗಿತ
ವರುಣಾರ್ಭಟಕ್ಕೆ ಮಲೆನಾಡು ಪ್ರದೇಶವಾದ ಸಕಲೇಶಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ದೊಡ್ಡತಪ್ಪಲೆ, ಮಾರನಹಳ್ಳಿ, ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಭೂಕುಸಿತ ಉಂಟಾಗಿ ತಾತ್ಕಾಲಿಕವಾಗಿ ಶಿರಾಡಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಬದಲಿ ಸಂಚಾರ ವ್ಯವಸ್ಥೆ ಮಾಡಲಾಗಿದೆ.
ಮಾರನಹಳ್ಳಿವರೆಗೆ ನಡೆಯುತ್ತಿರುವ ಅವೈಜ್ಞಾನಿಕ ಹಾಗೂ ಕಳಪೆ ರಸ್ತೆ ಕಾಮಗಾರಿಯ ಪರಿಣಾಮ ಹಲವು ಕಡೆ ದೊಡ್ಡ ಪ್ರಮಾಣದಲ್ಲಿ ಮಣ್ಣು ಕುಸಿಯುತ್ತಿದೆ. ರಸ್ತೆಗಳು ಬಿರುಕು ಬಿಟ್ಟಿದ್ದು, ಶಿರಾಡಿ ಮಾರ್ಗದ ಸಂಚಾರ ಬಂದ್ ಆಗಿದೆ.