ಸಕಲೇಶಪುರ: ಕಾಡಾನೆ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Update: 2024-08-06 06:25 GMT

ಸಕಲೇಶಪುರ :ಕಾಡಾನೆ ದಾಳಿಯಿಂದ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ತಾಲೂಕಿನ ವಡೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ.

ವಡೂರು ಗ್ರಾಮದ ಮಹೇಶ್ (47) ಕಾಡಾನೆ ದಾಳಿಯಿಂದ ಗಾಯಗೊಂಡ ವ್ಯಕ್ತಿ.  ಮನೆಯಿಂದ ಸ್ವಲ್ಪ ದೂರಲ್ಲಿದ್ದ ಅಂಗಡಿಗೆ ಸಾಮಾನು ತರಲು ತೆರಳುತ್ತಿದ್ದ ವೇಳೆ ಏಕಾಏಕಿ ಕಾಡಾನೆ ದಾಳಿ ಮಾಡಿದೆ. ಮಹೇಶ್ ಕಿರುಚಾಟ ಕೇಳಿ ಗ್ರಾಮಸ್ಥರು ಓಡಿ ಬಂದಿದ್ದು ಕೂಡಲೇ ಕಾಫಿ ತೋಟದೊಳಗೆ ಕಾಡಾನೆ ಹೋಗಿದೆ. ಗಾಯಾಳು ಮಹೇಶ್‌ ಗೆ ಸಕಲೇಶಪುರದ ಕ್ರಾಫರ್ಡ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News