ಸಕಲೇಶಪುರ | ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ : ಇಬ್ಬರು ಮೃತ್ಯು
Update: 2025-03-11 12:50 IST

ಸಸಕಲೇಶಪುರ : ಚಾಲಕನ ನಿಯಂತ್ರಣ ತಪ್ಪಿ ಕಬ್ಬಿಣದ ಪೈಪ್ ತುಂಬಿದ ಈಶರ್ ಲಾರಿ ಒಂದು ತಿರುವು ರಸ್ತೆಯಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಲಾರಿ ಮಗುಚಿ ಬಿದ್ದು, ಪಶ್ಚಿಮ ಬಂಗಾಳ ಮೂಲದ ಸುಮಾರು 25 ವರ್ಷದ ಇಬ್ಬರು ಕೂಲಿ ಕಾರ್ಮಿಕರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಮತ್ತೊರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಾಲ್ಲೂಕಿನ ವಳಲಹಳ್ಳಿ ಗ್ರಾಮ ಪಂಚಾಯತ್‌ನ ಮೊಗನಹಳ್ಳಿ ಸಮೀಪ ನಡೆದಿದೆ.
ರಾತ್ರಿ 10 ಗಂಟೆ ಸಮಯದಲ್ಲಿ ಮೊಗನಹಳ್ಳಿ ತಿರುವು ರಸ್ತೆಯಲ್ಲಿ ಅಪಘಾತ ಸಂಭವಿಸಿದಾಗ, ಸರಿಯಾದ ನೆಟ್ವರ್ಕ್ ಸಮಸ್ಯೆ ಕಾರಣ ಲಾರಿ ಹಾಗೂ ಕಬ್ಬಿಣದ ಪೈಪ್ ಮಧ್ಯೆ ಸಿಲುಕಿಕೊಂಡಿದ್ದವರನ್ನು ಸ್ಥಳೀಯರು ರಕ್ಷಿಸಲು ಸಾಧ್ಯವಾಗಲಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.