ಸಕಲೇಶಪುರ: ಕಾಫಿ ಬೆಳೆಗಾರ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
Update: 2024-11-21 09:43 IST

ಸಾಂದರ್ಭಿಕ ಚಿತ್ರ (Meta A1)
ಹಾಸನ: ನ.21: ಕಾಫಿ ಬೆಳೆಗಾರರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಕಲೇಶಪುರ ತಾಲ್ಲೂಕಿನ, ಬಾಚೀಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕರುಣಾಕರ (40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಅವರು ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಮನೆಯಲ್ಲೇ ತಮ್ಮ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸ್ಥಳಕ್ಕೆ ಯಸಳೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.