ಸಕಲೇಶಪುರ | ಹಿಟ್ ಆ್ಯಂಡ್ ರನ್: ಪಾದಚಾರಿ ಮೃತ್ಯು
Update: 2025-01-28 16:07 IST

ಸಕಲೇಶಪುರ: ಪಟ್ಟಣದ ಹೊರವಲಯದ ಬೈಪಾಸ್ನಲ್ಲಿ ಸಂಭವಿಸಿದ ಹಿಟ್ ಆ್ಯಂಡ್ ರನ್ ರಸ್ತೆ ಅಪಘಾತದಲ್ಲಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ಸಂಭವಿಸಿದೆ.
ಕೌಡಳ್ಳಿ ಗ್ರಾಮದ ನಿವಾಸಿ ಮಂಜುನಾಥ್ (ಗುಂಡ) (46) ಮೃತಪಟ್ಟವರು. ಇವರು ಇಂದು ಮುಂಜಾನೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಕೆಳಗೆ ಬಿದ್ದು ಮೃತಪಟ್ಟ ಅವರ ಮೇಲೆ ಬೇರೆ ವಾಹನಗಳೂ ಹರಿದಿದ್ದು ಮೃತದೇಹ ಸಂಪೂರ್ಣ ನಜ್ಜುಗುಜ್ಜಾಗಿ, ದೇಹದ ಭಾಗಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತಕ್ಕೆ ಕಾರಣವಾದ ವಾಹನವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ.
ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.