ಹಾಲಿ ಸಂಸದ ಪ್ರಜ್ವಲ್ ವಿರುದ್ಧ ಕಾಂಗ್ರೆಸ್‌ನ ಶ್ರೇಯಸ್ ಪಟೇಲ್‌ಗೆ ಜಯ

Update: 2024-06-04 17:37 GMT

ಹಾಸನ : ಜೆಡಿಎಸ್ ಭದ್ರಕೋಟೆಯಾಗಿದ್ದ ಹಾಸನ ಜಿಲ್ಲೆಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವಿನ ನಗೆ ಬೀರಿದೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಒಟ್ಟು 6,72,988 ಮತಗಳನ್ನು ಪಡೆಯುವ ಮೂಲಕ 42,649 ಮತಗಳ ಅಂತರದಿಂದ ಹಾಲಿ ಸಂಸದ ಜೆಡಿಎಸ್‌ನ ಪ್ರಜ್ವಲ್ ರೇವಣ್ಣ ವಿರುದ್ಧ ಗೆಲುವು ಪಡೆದಿದ್ದಾರೆ.

ಹಾಲಿ ಸಂಸದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ 6,30,339 ಮತಗಳನ್ನು ಪಡೆದು ಚುನಾವಣೆಯಲ್ಲಿ ಸೋಲನ್ನು ಅನುಭವಿಸಿದ್ದಾರೆ.

ಎರಡು ದಶಕಗಳ ನಂತರ ಕಾಂಗ್ರೆಸ್ ತೆಕ್ಕೆಗೆ ಹಾಸನ ಲೋಕಸಭೆ ಕ್ಷೇತ್ರವನ್ನು ತೆಗೆದುಕೊಂಡಿರುವುದರಿಂದ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ.

1999ರಲ್ಲಿ ದೇವೇಗೌಡರನ್ನು ಜಿ.ಪುಟ್ಟಸ್ವಾಮಿ ಅವರು ಸೋಲಿಸಿದ್ದು, 2004ರ ಚುನಾವಣೆಯಲ್ಲಿ ಎಚ್.ಸಿ.ಶ್ರೀಕಂಠಯ್ಯ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಎದುರು ಪರಾಭವಗೊಳ್ಳುವುದರೊಂದಿಗೆ ಹಾಸನ ಲೋಕಸಭಾ ಕ್ಷೇತ್ರವನ್ನು ಕಳೆದುಕೊಂಡಿದ್ದ ಕಾಂಗ್ರೆಸ್, ಕ್ಷೇತ್ರವನ್ನು ಮರಳಿ ಪಡೆಯಲು ಎರಡು ದಶಕಗಳೇ ಕಳೆದಿವೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News