ಗ್ಯಾರಂಟಿ ಜಾರಿಯಿಂದಾಗಿ ಬಿಜೆಪಿ-ಜೆಡಿಎಸ್‌ಗೆ ಸಮಾಧಾನವಿಲ್ಲದಂತಾಗಿದೆ : ಸಿದ್ದರಾಮಯ್ಯ

Update: 2024-10-28 18:19 GMT

ಹಾಸನಾಂಬೆಯ ದರ್ಶನ ಪಡೆದ ಸಿಎಂ

ಹಾಸನ : ಹಾಸನ ನಗರಸಭೆಯನ್ನು ನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸಲು ಸಚಿವ ಸಂಪುಟ ನಿರ್ಣಯ ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸೋಮವಾರ ಹಾಸನಾಂಬೆಯ ದರ್ಶನ ಪಡೆದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೇಮಾವತಿ ಜಲಾಶಯದ ಪ್ರದೇಶದಲ್ಲಿ ಉದ್ಯಾನವನ ನಿರ್ಮಿಸಲು ಸರ್ಕಾರ ಪ್ರಮಾಣಿಕ ಪ್ರಯತ್ನ ಮಾಡಲಿದೆ. ಹಾಸನ ವಿಮಾನ ನಿಲ್ದಾಣ ತ್ವರಿತವಾಗಿ ಪೂರ್ಣಗೊಳಿಸಲಾಗುವುದು. ಹಾಸನ ಜಿಲ್ಲೆಗೆ ಹೆಚ್ಚಿನ ಅಭಿವೃದ್ಧಿಗಾಗಿ ಅವಶ್ಯಕ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳು ಸಲ್ಲಿಸಿದರೆ, ಅದರಂತೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಟೀಕೆಗಳನ್ನು ಮೆಟ್ಟಿ ನಿಂತು ಗ್ಯಾರಂಟಿಗಳ ಜಾರಿ :

ಅಧಿಕಾರಕ್ಕೆ ಬಂದ ಎಂಟು ತಿಂಗಳೊಳಗಾಗಿ ಗ್ಯಾರಂಟಿಗಳನ್ನು ಜಾರಿ ಮಾಡಲಾಯಿತು. ಈ ಯೋಜನೆಗಳಿಂದ ಖಜಾನೆ ಖಾಲಿಯಾಗುತ್ತದೆ , ದಿವಾಳಿಯಾಗುತ್ತದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. ಆ ಎಲ್ಲ ಟೀಕೆಗಳನ್ನು ಮೆಟ್ಟಿ ನಿಂತು, ಗ್ಯಾರಂಟಿಗಳನ್ನು ಜಾರಿ ಮಾಡಿ , ಬಡವರಿಗೆ ಶಕ್ತಿ ತುಂಬಲಾಗಿದೆ. ಬಡವರು ಖುಷಿಯಾಗಿದ್ದು, ಸಮಾಧಾನದಿಂದ್ದಾರೆ. ಆದರೆ, ಬಿಜೆಪಿ ಹಾಗೂ ಜೆಡಿಎಸ್‌ ವರಿಗೆ ಸಮಾಧಾನವಾದಂತಿಲ್ಲ. ನಮ್ಮ ಸರ್ಕಾರ ಬಡವರ ಪರವಾಗಿ , ಅವರಿಗೆ ನ್ಯಾಯ ಒದಗಿಸುವ ಕೆಲಸವನ್ನು ಮಾಡುತ್ತಿದ್ದು, ಸಾಮಾಜಿಕ ನ್ಯಾಯ ಹಾಗೂ ಬಡವರ ಪರವಾಗಿಲ್ಲದವರಿಗೆ ಇದರಿಂದ ಸಮಾಧಾನವಿಲ್ಲದಂತಾಗಿದೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News