ಅಶ್ಲೀಲ ವಿಡಿಯೋಗಳ ಹಂಚಿಕೆ ಪ್ರಕರಣ | ಎಸ್.ಐ.ಟಿ.ಯಿಂದ 18 ಕಡೆಗಳಲ್ಲಿ ಶೋಧ

Update: 2024-05-15 07:59 GMT

ಪ್ರಜ್ವಲ್‌ ರೇವ‍ಣ್ಣ

ಹಾಸನ : ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಲೈಂಗಿಕ ಹಗರಣಕ್ಕೆ ಸಂಬಂಧಿಸಿದಂತೆ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ ವಿಚಾರದಲ್ಲಿ ನಿನ್ನೆಯಿಂದ(ಮೇ.14) ಇಂದು(ಮೇ.15) ಬೆಳಗ್ಗಿನ ಜಾವದವರೆಗೆ ಎಸ್‌ಐಟಿ ಅಧಿಕಾರಿಗಳು ನಗರದ 18 ಕಡೆಗಳಲ್ಲಿ ದಾಳಿ ನಡೆಸಿರುವುದು ವರದಿಯಾಗಿದೆ.

ವಿಶೇಷ ತಿನಿಖಾ ತಂಡದ ಅಧಿಕಾರರಿಗಳು ಬುಧವಾರ ಬೆಳಗಿನ ಜಾವ 3.30 ರವರೆಗೂ ಶೋಧಕಾರ್ಯ ನಡೆಸಿದೆ ಎಂದು ಗೊತ್ತಾಗಿದೆ. ಹಾಸನ ಮಾಜಿ ಶಾಸಕ ಪ್ರೀತಂಗೌಡ ಆಪ್ತರು ಎನ್ನಲಾದ ಕ್ವಾಲಿಟಿ ಬಾರ್ ಮಾಲೀಕ ಶರತ್, ಪುನೀತ್, ಎಚ್.ಪಿ.ಕಿರಣ್, ಕಾಂಗ್ರೆಸ್ ಕಾರ್ಯಕರ್ತರಾದ ಪುಟ್ಟರಾಜು, ನವೀನ್‌ಗೌಡ, ಪ್ರಜ್ವಲ್‌ ರೇವಣ್ಣ ಮಾಜಿ ಕಾರುಚಾಲಕ ಕಾರ್ತಿಕ್, ಶಶಿ, ಚೇತನ್‌ಗೌಡ ನಿವಾಸದ ಮೇಲೂ ಎಸ್ಐಟಿ ತಂಡಗಳು ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ.

ದಾಳಿ ಸಂದರ್ಭದಲ್ಲಿ ಕ್ವಾಲಿಟಿ ಬಾರ್ ನ ಶರತ್ ಅವರ ಐಫೋನ್ ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಉಪಯುಕ್ತ ದಾಖಲಾತಿ, ಎಲೆಕ್ಟ್ರಾನಿಕ್ ವಸ್ತುಗಳು ಅವರ ಮನೆಯಲ್ಲಿ ದೊರಕಿಲ್ಲ ಎಂದು ಎಸ್ಐಟಿ ಶೋಧನಾ ಪಂಚನಾಮೆಯಲ್ಲಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News