ಸಕಲೇಶಪುರ: ಉಪಟಳ ನೀಡುತ್ತಿದ್ದ ಕಾಡಾನೆ ಸೆರೆ

ಸಕಲೇಶಪುರ: ಸಕಲೇಶಪುರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ಸಂಚರಿಸಿ ಸಾರ್ವಜನಿಕರಿಗೆ ಭಯ ಹುಟ್ಟಿಸಿ ಬೆಳೆ ಹಾಗೂ ಆಸ್ತಿ ಪಾಸ್ತಿ ಹಾನಿ ಮಾಡುತ್ತಿದ್ದ ಕಾಡಾನೆಯನ್ನು ಇಂದು ಅರಣ್ಯ ಇಲಾಖೆ ಸಿಬ್ಬಂದಿ ಇಂದು ಸೆರೆ ಹಿಡಿದರು.
ನಿರಂತರವಾಗಿ ರಸ್ತೆಯಲ್ಲಿ ತಿರುಗಾಡುತ್ತ ಉಪಟಳ ನೀಡುತ್ತಿದ್ದ ಕಾಡಾನೆಯನ್ನು ಸೆರೆ ಹಿಡಿದು ಸಕ್ಕರೆ ಬೈಲಿಗೆ ಸ್ಥಳಾಂತರಿಸುವ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಯಶಸ್ವಿಯಾದರು.
ಮಾರ್ಜ್ 23 ರಂದು ನಡೆದ ಕಾರ್ಯಾಚರಣೆಯಲ್ಲಿ ಅಂದಾಜು 15 ರಿಂದ 18 ವರ್ಷ ವಯಸ್ಸಿನ ಮಕ್ನ ಎಂಬ ಕಾಡಾನೆಯನ್ನು ಸಕಲೇಶಪುರ ತಾಲೂಕು, ಬೆಳಗೋಡು ಹೋಬಳಿ, ದೊಡ್ಡದೀಣೆ ಗ್ರಾಮದ ಬಳಿ ಇರುವ ಕಾಫಿ ತೋಟದಲ್ಲಿ ಸೆರೆ ಹಿಡಿಯಲಾಯಿತು ಕಾಡಾನೆಯನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯು ಕಾರ್ಯಾಚರಣೆಯನ್ನು ಕೈಗೊಂಡಿತ್ತು.
ಕಾರ್ಯಾಚರನೆಯಲ್ಲಿ ಧನಂಜಯ , ಪ್ರಶಾಂತ, ಭೀಮ ,ಕಂಜನ್, ಹರ್ಷ, ಏಕಲವ್ಯ, ಮತ್ತು ಮಹೇಂದ್ರ ಎಂಬ ಸಾಕಾನೆಗಳು ಭಾಗವಹಿಸಿದ್ದವು.
ಈ ಸಂದರ್ಭದಲ್ಲಿ ಆರ್.ಆರ್.ಟಿ ಸಿಬ್ಬಂದಿಗಳು ಮಾವುತರು ಸಹ ಇದ್ದರು.