ಬೇಲೂರು: ಕಾಡಾನೆ ದಾಳಿಗೆ ಮಹಿಳೆ ಬಲಿ
Update: 2025-03-14 20:24 IST

ಬೇಲೂರು: ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಕಾಡಾನೆ ದಾಳಿಗೆ ಬಲಿಯಾದ ಘಟನೆ ಬೇಲೂರು ತಾಲ್ಲೂಕಿನ ಬೊಮ್ಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸುಶೀಲಮ್ಮ (47) ಎಂದು ಗುರುತಿಸಲಾಗಿದೆ. ಘಟನೆ ನಡೆದ ತಕ್ಷಣ ಸ್ಥಳೀಯರು ಅರಣ್ಯ ಇಲಾಖೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಅರೇಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಆಕ್ರೋಶಗೊಂಡ ಗ್ರಾಮಸ್ಥರು ಟೈರಿಗೆ ಬೆಂಕಿ ಹಚ್ಚಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
