ಉಪ ಚುನಾವಣೆ | ಶಿಗ್ಗಾಂವಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ನಾಮಪತ್ರ ಸಲ್ಲಿಕೆ

Update: 2024-10-24 12:36 GMT

ಹಾವೇರಿ: ಉಪಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಭರತ್ ಬೊಮ್ಮಾಯಿ ಅವರು ಗುರುವಾರ ನಾಮಪತ್ರ ಸಲ್ಲಿಸಿದರು.

ತಾಯಿಯ ಸೂಚನೆಯಂತೆ ನಾಮಪತ್ರ ಸಲ್ಲಿಸಿದ್ದೇನೆ : ಭರತ್ ಬೊಮ್ಮಾಯಿ

ಶಿಗ್ಗಾವಿಯಲ್ಲಿಂದು ನಾಮಪತ್ರ ಸಲ್ಲಿಸಿ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ʼನಮ್ಮ ತಾಯಿಯವರ ಸೂಚನೆಯಂತೆ ಒಳ್ಳೆಯ ಮುಹೂರ್ತದಲ್ಲಿ ಇಂದು ಶಿಗ್ಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆʼ ಎಂದು ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಹೇಳಿದ್ದಾರೆ.

ʼತಂದೆ ತಾಯಿಯವರ ಆಶೀರ್ವಾದ, ಹಿರಿಯರ ಆಶೀರ್ವಾದ, ಪಕ್ಷದ ವರಿಷ್ಠರ ಆಶೀರ್ವಾದದಿಂದ ನಾನು ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡಿದ್ದೇನೆ. ನಾಳೆ ಬಹಿರಂಗವಾಗಿ ನಾಮಪತ್ರ ಸಲ್ಲಿಕೆ ಮಾಡಲಿದ್ದೇನೆ. ನಾಳೆ ಪಕ್ಷದ ಅನೇಕ ನಾಯಕರು ಪಾಲ್ಗೊಳ್ಳಲಿದ್ದಾರೆʼ ಎಂದು ತಿಳಿಸಿದರು.

ಸಂಡೂರಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಅನ್ನಪೂರ್ಣ ನಾಮಪತ್ರ ಸಲ್ಲಿಕೆ :

ಸಂಡೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಅವರು ರೋಡ್ ಶೋ ಮೂಲಕ ಆಗಮಿಸಿ ನಾಮಪತ್ರ ಸಲ್ಲಿಕೆ ಮಾಡಿದರು.

ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ನಾಮಪತ್ರ ಸಲ್ಲಿಕೆಗೂ ಮುನ್ನ ಸಂಡೂರಿನ ಎಪಿಎಂಸಿಯಿಂದ ತಾಲೂಕು ಆಡಳಿತ ಸೌಧವರೆಗೂ ಬಹೃತ್ ರೋಡ್ ಶೋ ನಡೆಸಲಾಯಿತು. ಸುಮಾರು ಎರಡು ಕಿ.ಮೀ.ವರೆಗೆ ನಡೆದ ರೋಡ್ ಶೋನಲ್ಲಿ ವಿವಿಧ ಕಲಾತಂಡಗಳು, ಬೆಂಬಲಿಗರು, ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ದರು. ವಿಜಯಾ ಸರ್ಕಲ್‍ನಲ್ಲಿ ಬಹಿರಂಗ ಸಭೆ ನಡೆಸಿ ಸಾರ್ವಜನಿಕರನ್ನು ಉದ್ದೇಶಿಸಿ ಮುಖಂಡರು ಮಾತನಾಡಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News