ವಕ್ಫ್ ವಿಚಾರದಲ್ಲಿ ಬಿಜೆಪಿ ನಾಯಕರು ನಾಟಕವಾಡುತ್ತಿದ್ದಾರೆ : ಸಚಿವ ಶಿವರಾಜ್ ತಂಗಡಗಿ

Update: 2024-11-09 20:03 IST
Photoof  Shivraj Thangadagi

 ಶಿವರಾಜ್ ತಂಗಡಗಿ

  • whatsapp icon

ಶಿಗ್ಗಾಂವಿ : ʼವಕ್ಫ್ ವಿಚಾರದಲ್ಲಿ ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ. ಹಿಂದೆ ಬಿಜೆಪಿ ಸರಕಾರ ಇದ್ದಾಗಲೇ ನೋಟಿಸ್ ಕೊಡುವ ಕೆಲಸ ಮಾಡಿದ್ದಾರೆʼ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕಿಡಿಗಾರಿದರು.

ಶನಿವಾರ ಶಿಗ್ಗಾಂವಿಯಲ್ಲಿ ಸುದ್ದಿಗೋಷ್ಠಿಯನ್ನುದೇಶಿಸಿ ಮಾತನಾಡಿದ ಅವರು, ಈಗ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಂಸದ ತೇಜಸ್ವಿ ಸೂರ್ಯ ಸೇರಿದಂತೆ ಇತರ ಬಿಜೆಪಿ ಮುಖಂಡರು ನಾಟಕವಾಡುತ್ತಿದ್ದಾರೆ. ಈ ಹಿಂದೆ ನನ್ನ ಕ್ಷೇತ್ರದಲ್ಲಿಯೇ 1548 ಆಸ್ತಿಗಳಿಗೆ ವಕ್ಫ್ ನಿಂದ ನೋಟಿಸ್ ಕೊಡಿಸಲಾಗಿತ್ತು ಎಂದು ಹೇಳಿದರು.

ಶಿಗ್ಗಾಂವಿಯಲ್ಲಿ ಒಂದು ಒಳ್ಳೆ ವಾತಾವರಣ ಇದೆ. ಸಂಡೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲವುದು ನೂರಕ್ಕೆ ನೂರು ಸತ್ಯ. ಬಿಜೆಪಿಯವರು ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುತ್ತಿದ್ದರು. ಪಂಚಮಸಾಲಿ ಸಮುದಾಯಕ್ಕೆ ಇಲ್ಲಿ ಟಿಕೆಟ್ ಕೊಡಿಸುವುದಕ್ಕೆ ಹೋದ ಬಸವರಾಜ ಬೊಮ್ಮಾಯಿ, ತಮ್ಮ ಮಗನಿಗೆ ಟಿಕೆಟ್ ಕೊಡಿಸಿದ್ದಾರೆ ಎಂದು ಅವರು ತಿಳಿಸಿದರು.

ಕೇಂದ್ರ ಸಚಿವರ ಕಾರ್ಯಕ್ರಮ ನೋಡುತ್ತಿದ್ದೆ ಅಲ್ಲಿ ಜನರೇ ಇಲ್ಲ. ಅಭಿವೃದ್ಧಿ ಕೆಲಸ ಮಾಡಿ ಮತ ಕೇಳಲು ಬಿಜೆಪಿಯವರಿಗೆ ಸಾಧ್ಯವಿಲ್ಲ. ಆದುದರಿಂದ, ಜನರನ್ನು ತಪ್ಪು ದಾರಿಗೆ ಎಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಶಿವರಾಜ್ ತಂಗಡಗಿ ಆರೋಪಿಸಿದರು.

ನಾವು ಐದು ಗ್ಯಾರಂಟಿಗಳನ್ನ ಕೊಟ್ಟಿದ್ದಕ್ಕೆ ಸಾಮಾನ್ಯ ಜನರು ನೆಮ್ಮದಿಯಿಂದ ಬದುಕುತ್ತಿದ್ದಾರೆ. ಬಿಜೆಪಿ ನಾಯಕರು, ಬಸವರಾಜ ಬೊಮ್ಮಾಯಿ ಒಂದಾದರೂ ಇಂತಹ ಯೋಜನೆ ಕೊಟ್ಟಿದ್ದಾರಾ ಎಂಬುದನ್ನು ಹೇಳಲಿ. ರಾಜ್ಯದ ಜನ ಎಲ್ಲವನ್ನು ಗಮನಿಸುತ್ತಿದ್ದಾರೆ ಎಂದು ಅವರು ತಿಳಿಸಿದರು.

ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ, ಜಲಸಂಪನ್ಮೂಲ ಸಚಿವರು ಆಗಿದ್ದರು. ಈ ಭಾಗದಲ್ಲಿ ಒಂದು ರಸ್ತೆಯೂ ಸರಿ ಇಲ್ಲ. ನಿಮಗೆ ತಾಕತ್ ಇದ್ದರೆ ಅಭಿವೃದ್ಧಿ ಮಾಡಿದ್ದೇವೆ ಅಂತಾ ಮತ ಕೇಳಿ ನೋಡೋಣ ಎಂದು ಸವಾಲು ಹಾಕಿದ ಶಿವರಾಜ್ ತಂಗಡಗಿ, ನಾವು ಅಭಿವೃದ್ಧಿ ಆಧಾರದಲ್ಲಿ ಮತ ಯಾಚನೆ ಮಾಡುತ್ತೇವೆ ಎಂದು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News