ಹಾವೇರಿ | ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು
Update: 2025-04-01 23:41 IST
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮೃತ್ಯು
ಹಾವೇರಿ : ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಸ್ನೇಹಿತರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಹಿರೇಕೆರೂರು ತಾಲ್ಲೂಕಿನ ಚಿಕ್ಕಬೂದಿಹಾಳ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಮಂಜು ಸಣ್ಣಮನಿ (20), ರಾಜು ಕರೆಪೇಟೆ (22) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ಹೋಗಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ಹಂಸಭಾವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.