ಹಾವೇರಿ: ರಸ್ತೆ ಅಪಘಾತದಲ್ಲಿ ಮೃತಪಟ್ಟವರಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

Update: 2024-06-28 09:34 GMT

ಹಾವೇರಿ: ಜಿಲ್ಲೆಯ ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ತೀರ್ಥಯಾತ್ರೆ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಮ್ಮಿಹಟ್ಟಿ ಗ್ರಾಮದ 13 ಮಂದಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಎಕ್ಸ್‌ ಪೋಸ್ಟ್‌ ಮೂಲಕ ರುವ ಸಿಎಂ ಸಿದ್ದಾರಾಮಯ್ಯ ಅವರು, ಹಾವೇರಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ 13 ಮಂದಿ ಮೃತಪಟ್ಟ ಸುದ್ದಿ ತಿಳಿದು ನೋವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು  ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News