ಝಮೀರ್ ಅವರೇ ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ? : ಬಸವರಾಜ ಬೊಮ್ಮಾಯಿ

Update: 2024-11-08 16:40 GMT

ಬಸವರಾಜ ಬೊಮ್ಮಾಯಿ

ಹಾವೇರಿ : ವಸತಿ ಸಚಿವ ಝಮೀರ್ ಅಹ್ಮದ್ ಅವರು ಶಿಗ್ಗಾಂವಿಯಲ್ಲಿ ಒಂದೂ ಮನೆ ಕಟ್ಟಿಲ್ಲ ಎಂದು ಹೇಳಿದ್ದಾರೆ. ನಾನು 12 ಸಾವಿರಕ್ಕೂ ಹೆಚ್ಚು ಮನೆ ನಿರ್ಮಾಣ ಮಾಡಿದ್ದೇನೆ. ಝಮೀರ್ ಅವರೇ, ನೀವು ಶಿಗ್ಗಾಂವಿ ಕ್ಷೇತ್ರದಲ್ಲಿ ಒಂದೂವರೆ ವರ್ಷದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ, ನಿಮ್ಮ ಕ್ಷೇತ್ರದಲ್ಲಿ ಎಷ್ಟು ಮನೆ ಕಟ್ಟಿಸಿದ್ದೀರಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ.

ಶುಕ್ರವಾರ ಶಿಗ್ಗಾಂವಿ ಕ್ಷೇತ್ರದ ಹಿರೇಬೆಂಡಿಗೇರಿ ಗ್ರಾಮದಲ್ಲಿ ಬಿಜೆಪಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಶಿಗ್ಗಾಂವಿಯಲ್ಲಿ ಬೊಮ್ಮಾಯಿಯವರು ಯಾವುದಾದರು ಒಂದು ಯೋಜನೆ ತಂದಿದ್ದಾರಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ತಿಳಿಸಲು ಬಯಸುತ್ತೇನೆ. ಇಡೀ ರಾಜ್ಯದಲ್ಲಿ ಕೆರೆ ತುಂಬಿಸುವ ಯೋಜನೆ ಆರಂಭಿಸಿದ್ದು ನಾನೇ ಎಂದು ತಿರುಗೇಟು ನೀಡಿದರು.

ಬಸನಗೌಡ ಪಾಟೀಲ್ ಯತ್ನಾಳ್ ಅವರು ಇಂಡಿ ಏತ ನೀರಾವರಿ ಯೋಜನೆ, ಬಿಜಾಪುರ ಸಮಗ್ರ ನೀರಾವರಿ ಯೋಜನೆಗೆ ಹೋರಾಟ ಮಾಡಿದ್ದರು. ಆಗ ಅಲ್ಲಿ ಭಾಗವಹಿಸಿ ಅಂತರ್ಜಲ ಹೆಚ್ಚಿಸಲು ಕೆರೆ ತುಂಬಿಸುವ ಯೋಜನೆ ಮಾಡುವುದು ಸೂಕ್ತ ಎಂದು ತಿಳಿದು ಅಲ್ಲಿ ಕೆರೆ ತುಂಬಿಸುವ ಯೋಜನೆ ಮಾಡಿದೆ. ನಂತರ ಶಿಗ್ಗಾಂವಿ ಸವಣೂರು ಏತ ನೀರಾವರಿ ಕೆರೆ ತುಂಬಿಸುವ ಯೋಜನೆ ಮಾಡಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಕನಕಪುರದಲ್ಲಿ ಸುಮಾರು ವರ್ಷಗಳಿಂದ ಒಂದು ನೀರಾವರಿ ಯೋಜನೆ ಮಾಡಿರಲಿಲ್ಲ. ಅಲ್ಲಿನ ಜನರು ಬಂದು ನನಗೆ ಮನವಿ ಮಾಡಿದ್ದರು. ನಾನು ಹೋಗಿ ನೀರಾವರಿ ಯೋಜನೆ ಜಾರಿ ಮಾಡಿದೆ. ವರುಣಾ ಕ್ಷೇತ್ರದಲ್ಲಿ 103ಕಿ.ಮೀ. ರಸ್ತೆ ಮಾಡಿದ್ದು ಬಸವರಾಜ ಬೊಮ್ಮಾಯಿ, ಈ ಸರಕಾರಕ್ಕೆ ರಸ್ತೆ ಗುಂಡಿ ಮುಚ್ಚಲು, ಡಾಂಬಾರ್ ಹಾಕಲು ಹಣ ಇಲ್ಲ, ಮಣ್ಣು ಹಾಕಿ ರಸ್ತೆ ಗುಂಡಿ ಮುಚ್ಚಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

Full View

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News