ಬಿಜೆಪಿ ಮೂರು ಕ್ಷೇತ್ರದಲ್ಲಿ ಗೆದ್ದರೆ, ನೀವು ರಾಜೀನಾಮೆ ಕೊಡುತ್ತೀರಾ? : ಸಿಎಂಗೆ ಬಿಎಸ್‌ವೈ ಸವಾಲು

Update: 2024-11-10 17:04 IST
Photo of  Yediyurappa

ಬಿ.ಎಸ್.ಯಡಿಯೂರಪ್ಪ

  • whatsapp icon

ಹಾವೇರಿ : "ಉಪ ಚುನಾವಣೆಯಲ್ಲಿ ಶಿಗ್ಗಾಂವಿ ಸೇರಿದಂತೆ ಮೂರು ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರವಾದ ಗಾಳಿ ಇದೆ. ಮೂರು ಕ್ಷೇತ್ರದಲ್ಲಿ ಬಿಜೆಪಿ ಗೆದ್ದರೆ, ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೀರಾ" ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಶ್ನಿಸಿದ್ದಾರೆ.

ಶಿಗ್ಗಾವಿ ಸವಣೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರವಾಗಿ ಇಂದು ಹುಲಗೂರು, ತಡಸ್ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಚುನಾವಣಾ ಪ್ರಚಾರ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ʼಶಿಗ್ಗಾವಿ‌ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭರತತ್ಬೊಮ್ಮಾಯಿ 50‌ ಸಾವಿರ ಮತಗಳ ಅಂತರದಿಂದ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಸೂರ್ಯ-ಚಂದ್ರ ಇರುವುದು ಎಷ್ಟು ಸತ್ಯವವೋ ಭರತ್ ಬೊಮ್ಮಾಯಿ ಗೆಲುವು ಅಷ್ಟೇ ಸತ್ಯʼ ಎಂದು ಹೇಳಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ರೈತರಿಗೆ ಕೇಂದ್ರದ ಕಿಸಾನ್ ಸಮ್ಮಾನ್ ಯೋಜನೆ ಜೊತೆಯಲ್ಲಿ ನಾನು 4000 ರೂ. ಕೊಡುತ್ತಿದ್ದೆ. ಅದನ್ನು ಯಾಕೆ ನಿಲ್ಲಿಸಿದ್ದೀರಿ ಹೇಳಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು ಒಂದೂವರೆ ವರ್ಷವಾಯಿತು. ಇದುವರೆಗೂ ಒಂದು ಕಿಲೋ ಮೀಟರ್ ರಸ್ತೆ ಮಾಡಿದ್ದೀರಾ, ಒಂದೇ ಒಂದು ಗುಂಡಿ ಮುಚ್ಚಿಲ್ಲ. ನಿಮ್ಮ ರಾಜಕೀಯ ದೊಂಬರಾಟ ಉಪ ಚುನಾವಣೆ ಮುಗಿದ ಮೇಲೆ ಕೊಣೆಯಾಗಲಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ  ಸಂಸದ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಚಿವ ಸಿ.ಸಿ.ಪಾಟೀಲ್, ರಾಜು ಗೌಡ ಸೇರಿದಂತೆ ಅನೇಕ ನಾಯಕರು ಹಾಜರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Thalhath

contributor

Byline - ವಾರ್ತಾಭಾರತಿ

contributor

Similar News