ಶಿಗ್ಗಾಂವಿ | ಎರಡು ಕಾರುಗಳ ಮುಖಾಮುಖಿ ಢಿಕ್ಕಿ: ನಾಲ್ವರು ಮೃತ್ಯು
ಹಾವೇರಿ: ಎರಡು ಕಾರುಗಳ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬಾಲಕ ಸಹಿತ ನಾಲ್ವರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಬಳಿಯ ತಡಸ ಕ್ರಾಸ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
ಮೃತರನ್ನು ಚಾಮರಾಜಪೇಟೆ ನಿವಾಸಿ ಚಂದ್ರಮ್ಮ(59), ಅವರ ಪುತ್ರಿ ಮೀನಾ(38), ಕಾರು ಚಲಾಯಿಸುತ್ತಿದ್ದ ದಾವಣಗೆರೆ ಹರಿಹರ ನಿವಾಸಿ ಮಹೇಶ್ ಕುಮಾರ್ ಸಿ.(41) ಹಾಗೂ ಹರಿಹರ ನಿವಾಸಿ ಧನ್ವೀರ್(11) ಎಂದು ಗುರುತಿಸಲಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳು ಮುಖಾಮುಖಿ ಢಿಕ್ಕಿ ಹೊಡೆದಿವೆ. ಇದರಿಂದಾಗಿ, ಒಂದು ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಇನ್ನಿಬ್ಬರನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇನ್ನೊಂದು ಕಾರಿನಲ್ಲಿದ್ದ ಚಾಲಕ ಹಾಗೂ ಇತರರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದ ಒಂದು ಕಾರುಗಳು ಜಖಂಗೊಂಡಿವೆ.