ಹೆಬ್ರಿ | ಭಾರೀ ಮಳೆ; ಹೊಳೆಯಲ್ಲಿ ಕೊಚ್ಚಿ ಹೋದ ಕೂಲಿ ಕಾರ್ಮಿಕ
ಹೆಬ್ರಿ: ಭಾರೀ ಮಳೆಗೆ ಉಕ್ಕಿ ಹರಿಯುವ ಹೊಳೆಯಲ್ಲಿ ಕೂಲಿ ಕಾರ್ಮಿಕನೋರ್ವ ಕೊಚ್ಚಿಕೊಂಡು ಹೋದ ಘಟನೆ ನಾಡ್ಪಾಲು ಗ್ರಾಮದ ನೆಲ್ಲಿಕಟ್ಟೆ ಚೀರೊಳ್ಳಿ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಕೂಲಿ ಕಾರ್ಮಿಕನ್ನು ತುಮಕೂರು ಮೂಲದ ಆನಂದ್ (45) ಎಂದು ಗುರುತಿಸಲಾಗಿದೆ. ತಾನು ಕೆಲಸ ಮಾಡುವ ಮನೆಗೆ ತೆರಳಲು ಸೀತಾನದಿಯ ಉಪನದಿಯನ್ನು ದಾಟಿ ಹೋಗಬೇಕಿತ್ತು. ಉಪನದಿಗೆ ದಾಟಲು ಕಾಲು ಸೇತುವ ಸಹಿತ ಯಾವುದೇ ವ್ಯವಸ್ಥೆ ಇರಲಿಲ್ಲ. ಹಗ್ಗದ ಸಹಾಯದಿಂದ ಹೊಳೆ ದಾಟುವಾಗ ಹಗ್ಗ ತುಂಡಾಗಿ ಘಟನೆ ಸಂಭವಿಸಿದೆ ಎನ್ನಲಾಗಿದೆ.
ನಾಡ್ಪಾಲಿನ ಮನೋರಮಾ ಹೆಗ್ಡೆ ಎಂಬವರಿಗೆ ಸೇರಿದ ತೋಟದಲ್ಲಿ ಕಳೆದ ಹಲವಾರು ವರ್ಷಗಳಿಂದ ದುಡಿಯುತ್ತಿದ್ದ ಕೃಷಿ ಕೂಲಿ ಕಾರ್ಮಿಕ ಕುಟುಂಬದವರು. ತೋಟದ ಮನೆಯಿಂದ ಹೊಳೆ ದಾಟಿ ಬರಲು ಕಾಲುಸೇತುವೆ ಸಹಿತ ಯಾವೂದೇ ಮೂಲ ಸೌಕರ್ಯ ವನ್ನು ಈ ತನಕ ಕಲ್ಪಿಸಲಾಗಿಲ್ಲ. ಹಾಗಾಗಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹೆಬ್ರಿ ಪೊಲೀಸ್ ಸಬ್ ಇನ್ಸ್ ಫೆಕ್ಟರ್ ಮಹೇಶ್ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಿಸಿದ್ದಾರೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.