ಪಶ್ಚಿಮ ರೈಲ್ವೇ ನೇಮಕಾತಿ-2024: 5,066 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ

Update: 2024-09-21 10:23 GMT

ಸಾಂದರ್ಭಿಕ ಚಿತ್ರ (PTI)

ಪಶ್ಚಿಮ ರೈಲ್ವೇ ನೇಮಕಾತಿ ಮಂಡಳಿ

5,066 ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಫಿಟ್ಟರ್, ವೆಲ್ಡರ್, ಕಾರ್ಪೆಂಟರ್, ಪೇಂಟರ್, ಡೀಸೆಲ್ ಮೆಕ್ಯಾನಿಕ್, ಮೋಟಾರು ವೆಹಿಕಲ್ ಮೆಕ್ಯಾನಿಕ್, ಇಲೆಕ್ಟ್ರೀಷಿಯನ್, ಇಲೆಕ್ಟ್ರಾನಿಕ್ ಮೆಕ್ಯಾನಿಕ್, ವೈಯರ್ ಮ್ಯಾನ್, ರೆಫ್ರಿಜೆರೇಟರ್(ಎಸಿ-ಮೆಕ್ಯಾನಿಕ್), ಪೈಫ್ ಫಿಟ್ಟರ್, ಪ್ಲಂಬರ್, ಸ್ಟೆನೋಗ್ರಾಫರ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಉದ್ಯೋಗದ ಸ್ಥಳ: ಮುಂಬೈ, ಮಹಾರಾಷ್ಟ್ರ

ಅರ್ಜಿ ಸಲ್ಲಿಕೆ ಹೇಗೆ?

ಪಶ್ಚಿಮ ರೈಲ್ವೇ ನೇಮಕಾತಿ ಮಂಡಳಿ ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಸೆ.23ರಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 22-10-2024ರ ಸಂಜೆ 5 ಗಂಟೆವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ.

ವಿದ್ಯಾರ್ಹತೆ: ಅಪ್ರೆಂಟಿಸ್‌ ಹುದ್ದೆಗಳ ನೇಮಕಾತಿಗಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಐಟಿಐ ಪಾಸ್‌ ಮಾಡಿರಬೇಕು. ಎನ್‌ಸಿವಿಟಿ ಅಥವಾ ಎಸ್‌ಸಿವಿಟಿ ಟ್ರೇಡ್‌ ಸರ್ಟಿಫಿಕೇಟ್‌ಗಳನ್ನು ಹೊಂದಿರಬೇಕು.

ಅರ್ಜಿ ಶುಲ್ಕ: 100ರೂ. ಎಸ್ಸಿ, ಎಸ್ಟಿ, ಪಿಡಬ್ಲ್ಯೂಡಿ, ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇರುತ್ತದೆ.

ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಅಧಿಕೃತ ವೆಬ್‌ಸೈಟ್ rrc-wr.com ಮೂಲಕ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ಸಲ್ಲಿಸಬೇಕಾಗಿದೆ.

ನೇಮಕಾತಿ ಪ್ರಕ್ರಿಯೆ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆಟ್ರಿಕ್ಯೂಲೇಷನ್‌ನ 50 ಶೇ. ಅಂಕಗಳು ಮತ್ತು ಐಟಿಐ ಟ್ರೇಡ್‌ನ 50 ಶೇ. ಅಂಕಗಳನ್ನು ಪರಿಗಣಿಸಿ ಮೆರಿಟ್‌ ಆಧಾರದ ಮೇಲೆ ಶಾರ್ಟ್‌ ಲಿಸ್ಟ್‌ ಮಾಡಲಾಗುತ್ತದೆ. ನಂತರ ವೈದ್ಯಕೀಯ ಪರೀಕ್ಷೆ ನಡೆಸಿ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗುತ್ತದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News