ಕೀನ್ಯಾ ಸಂಸತ್‍ಗೆ ನುಗ್ಗಲು ಯತ್ನಿಸಿದ ಪ್ರತಿಭಟನಾಕಾರರು; ಪೊಲೀಸರ ಗುಂಡೇಟಿಗೆ 5 ಮಂದಿ ಬಲಿ

Update: 2024-06-25 16:09 GMT

PC : NDTV 

ನೈರೋಬಿ : ಕೀನ್ಯಾ ಸಂಸತ್‍ಗೆ ನುಗ್ಗಲು ಪ್ರಯತ್ನಿಸಿದ ಪ್ರತಿಭಟನಾಕಾರರ ಮೇಲೆ ಪೊಲೀಸರು ಗುಂಡು ಹಾರಿಸಿದ್ದರಿಂದ ಕನಿಷ್ಠ 5 ಮಂದಿ ಸಾವನ್ನಪ್ಪಿದ್ದು ಸುಮಾರು 50 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ತೆರಿಗೆ ಹೆಚ್ಚಳವನ್ನು ವಿರೋಧಿಸುತ್ತಿದ್ದ ಪ್ರತಿಭಟನಾಕಾರರು ಸಂಸತ್‍ಗೆ ನುಗ್ಗುವ ಪ್ರಯತ್ನ ವಿಫಲವಾದ ಬಳಿಕ ಸಂಸತ್ ಭವನದ ಒಂದು ಭಾಗಕ್ಕೆ ಬೆಂಕಿ ಹಚ್ಚಿದ್ದಾರೆ. ಆ ಸಂದರ್ಭ ಸಂಸದರು ಸದನದಲ್ಲಿ ನಡೆಯುತ್ತಿದ್ದ ಅಧಿವೇಶನದಲ್ಲಿ ಪಾಲ್ಗೊಂಡಿದ್ದರು. ಪ್ರತಿಭಟನಾಕಾರರನ್ನು ತಡೆಯಲು ಅಶ್ರುವಾಯು ಪ್ರಯೋಗ ವಿಫಲವಾದ ಬಳಿಕ ಗುಂಡು ಹಾರಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಸಂಸತ್ ಭವನದಲ್ಲಿ ಬೆಂಕಿಯ ಕೆನ್ನಾಲಗೆ ವ್ಯಾಪಿಸಿದ್ದು ಅಗ್ನಿಶಾಮಕ ದಳ ಕಾರ್ಯಾಚರಣೆ ನಡೆಸುತ್ತಿದೆ ಎಂದು ರಾಯ್ಟರ್ಸ್ ವರದಿ ಮಾಡಿದೆ.

ತೆರಿಗೆ ಹೆಚ್ಚಳಕ್ಕೆ ನಮ್ಮ ವಿರೋಧವಿದೆ. ಈ ಸರಕಾರ ರಾಜೀನಾಮೆ ನೀಡಿ ನೂತನ ಸರಕಾರ ಅಸ್ತಿತ್ವಕ್ಕೆ ಬರಬೇಕು ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜಧಾನಿ ನೈರೋಬಿ ಸೇರಿದಂತೆ ಹಲವು ಪ್ರಮುಖ ನಗರಗಳಲ್ಲಿ ಪ್ರತಿಭಟನೆ ನಡೆದಿದೆ ಎಂದು ವರದಿಯಾಗಿದೆ. ಈ ಮಧ್ಯೆ, ತೆರಿಗೆ ಹೆಚ್ಚಳ ಮಸೂದೆಯನ್ನು ಸಂಸತ್ ಅನುಮೋದಿಸಿದ್ದು ಇದೀಗ ಸಹಿಗಾಗಿ ಅಧ್ಯಕ್ಷರ ಕಚೇರಿಗೆ ಕಳುಹಿಸಲಾಗಿದೆ ಎಂದು ಸರಕಾರ ಹೇಳಿದೆ.

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News