ಕಾಬೂಲ್ | ಆತ್ಮಾಹುತಿ ಬಾಂಬ್ ದಾಳಿಯಲ್ಲಿ 6 ಮಂದಿ ಮೃತ್ಯು

Update: 2024-09-03 17:29 GMT

  ಸಾಂದರ್ಭಿಕ ಚಿತ್ರ

ಕಾಬೂಲ್ : ಅಫ್ಘಾನ್ ರಾಜಧಾನಿ ಕಾಬೂಲ್‍ನಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು ಇತರ 13 ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.

ಕಾಬೂಲ್‍ನ ದಕ್ಷಿಣ ಹೊರವಲಯದ ಖಲಾ-ಬಖ್ತಿಯಾರ್ ಪ್ರದೇಶದಲ್ಲಿ ಸೋಮವಾರ ಸಂಜೆ ಸ್ಫೋಟಕಗಳನ್ನು ಧರಿಸಿದ್ದ ವ್ಯಕ್ತಿ ಜನಸಂದಣಿ ಪ್ರದೇಶದಲ್ಲಿ ತನ್ನನ್ನು ಸ್ಫೋಟಿಸಿಕೊಂಡಿದ್ದಾನೆ. ಮೃತಪಟ್ಟವರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ತನಿಖೆ ನಡೆಯುತ್ತಿದೆ . ಯಾವುದೇ ಸಂಘಟನೆ ಬಾಂಬ್ ಸ್ಫೋಟದ ಹೊಣೆ ವಹಿಸಿಕೊಂಡಿಲ್ಲ ಎಂದು ಕಾಬೂಲ್ ಪೊಲೀಸ್ ವಕ್ತಾರ ಖಾಲಿದ್ ಝರ್ದಾನ್ ಹೇಳಿದ್ದಾರೆ. 

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News