ನೈಟ್ ಕ್ಲಬ್ ನ ಛಾವಣಿ ಕುಸಿದು 18 ಮೃತ್ಯು, 120ಕ್ಕೂ ಹೆಚ್ಚು ಮಂದಿಗೆ ಗಾಯ
Update: 2025-04-08 21:31 IST

PC : NDTV
ಸ್ಯಾಂಟೊ ಡೊಮಿಂಗೊ: ಡೊಮಿನಿಕನ್ ಗಣರಾಜ್ಯದ ರಾಜಧಾನಿಯಲ್ಲಿ ಮಂಗಳವಾರ ಬೆಳಿಗ್ಗೆ ನೈಟ್ ಕ್ಲಬ್ ನ ಛಾವಣಿ ಕುಸಿದು ಕನಿಷ್ಠ 18 ಮಂದಿ ಸಾವನ್ನಪ್ಪಿದ್ದಾರೆ. 120ಕ್ಕೂ ಅಧಿಕ ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ನೈಟ್ ಕ್ಲಬ್ ನಲ್ಲಿ ಜನಪ್ರಿಯ ಗಾಯಕ ರೂಬಿ ಪೆರೆಝ್ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದ್ದು ಸಾವಿರಾರು ಜನರು ಪಾಲ್ಗೊಂಡಿದ್ದರು. ಆಗ ಏಕಾಏಕಿ ಪ್ರೇಕ್ಷಕರ ಮೇಲೆ ಛಾವಣಿ ಕುಸಿದಿದೆ. ತಕ್ಷಣ ತುರ್ತು ಕಾರ್ಯಪಡೆಯ 370ಕ್ಕೂ ಅಧಿಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದು ಕಲ್ಲು ಮಣ್ಣಿನ ರಾಶಿಯಡಿ ಸಿಲುಕಿದ್ದ ಹಲವರನ್ನು ರಕ್ಷಿಸಲಾಗಿದೆ. ದುರಂತದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.