ಅಫ್ಘಾನಿಸ್ತಾನ: ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ 3 ಮಂದಿ ಸಾವು

Update: 2024-03-21 17:44 GMT

ಕಾಬೂಲ್, ಮಾ.21: ಅಫ್ಘಾನಿಸ್ತಾನದ ಕಂದಹಾರ್ ನಗರದಲ್ಲಿ ಗುರುವಾರ ನಡೆದ ಆತ್ಮಹತ್ಯಾ ಬಾಂಬ್ದಾಳಿಯಲ್ಲಿ 3 ಮಂದಿ ಮೃತಪಟ್ಟಿದ್ದು ಇತರ 12 ಮಂದಿ ಗಾಯಗೊಂಡಿರುವುದಾಗಿ ಪ್ರಾಂತೀಯ ಅಧಿಕಾರಿ ಹೇಳಿದ್ದಾರೆ.

ಗುರುವಾರ ಬೆಳಗ್ಗೆ ಕಂದಹಾರ್ ನಗರದಲ್ಲಿ ನ್ಯೂ ಕಾಬೂಲ್ ಬ್ಯಾಂಕ್ನ ಎದುರು ಕಾಯುತ್ತಿದ್ದ ಜನರ ಗುಂಪನ್ನು ಗುರಿಯಾಗಿಸಿ ಸುಮಾರು 8 ಗಂಟೆಗೆ ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು ಮೂವರು ಮೃತಪಟ್ಟಿದ್ದಾರೆ ಹಾಗೂ 12 ಮಂದಿ ಗಾಯಗೊಂಡಿದ್ದಾರೆ. ಬಾಂಬ್ದಾಳಿಯ ಹೊಣೆಯನ್ನು ಯಾವುದೇ ಸಂಘಟನೆ ವಹಿಸಿಕೊಂಡಿಲ್ಲ ಎಂದು ಕಂದಹಾರ್ ಪ್ರಾಂತದ ಮಾಹಿತಿ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕ ಇನಾಮುಲ್ಲಾ ಸಮಂಗನಿ ಹೇಳಿದ್ದಾರೆ.

ಅಗ್ನಿಶಾಮಕ ದಳ ಮತ್ತು ಭದ್ರತಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು ಗಾಯಾಳುಗಳನ್ನು ಹಾಗೂ ಮೃತದೇಹಗಳನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಪರಿಸ್ಥಿತಿ ನಿಯಂತ್ರಣದಲ್ಲಿದ್ದು ಬಾಂಬ್ದಾಳಿಯ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್ಪಿ ಸುದ್ಧಿಸಂಸ್ಥೆ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - musaveer

contributor

Byline - ವಾರ್ತಾಭಾರತಿ

contributor

Similar News