ಗಾಝಾ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆಯಿಂದ 5 ರೋಗಿಗಳ ಮೃತ್ಯು: ವರದಿ
Update: 2024-02-16 18:01 GMT
ಗಾಝಾ: ಇಸ್ರೇಲ್ ಪಡೆಗಳು ವಶಪಡಿಸಿಕೊಂಡಿರುವ ದಕ್ಷಿಣ ಗಾಝಾದ ಪ್ರಮುಖ ಆಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಸ್ಥಗಿತಗೊಂಡಿ 5 ರೋಗಿಗಳು ಸಾವನ್ನಪ್ಪಿದ್ದಾರೆ ಎಂದು ಗಾಝಾದ ಆರೋಗ್ಯ ಅಧಿಕಾರಿಗಳು ಶುಕ್ರವಾರ ಹೇಳಿದ್ದಾರೆ.
ಆಸ್ಪತ್ರೆಯಲ್ಲಿ ಹಮಾಸ್ ಸಶಸ್ತ್ರ ಹೋರಾಟಗಾರರು ಅಡಗಿಕೊಂಡಿರುವ ಮಾಹಿತಿ ಇರುವುದರಿಂದ ಆಸ್ಪತ್ರೆಯಲ್ಲಿ ಶೋಧ ನಡೆಸುವುದಾಗಿ ಇಸ್ರೇಲ್ ಸೇನೆ ಹೇಳಿತ್ತು ಮತ್ತು ಅಕ್ಟೋಬರ್ 7ರ ದಾಳಿಯಲ್ಲಿ ಪಾಲ್ಗೊಂಡಿರುವ ಶಂಕೆಯಲ್ಲಿ 20 ಮಂದಿಯನ್ನು ಬಂಧಿಸಿರುವುದಾಗಿ ಘೋಷಿಸಿತ್ತು. ಈ ಮಧ್ಯೆ ಆಸ್ಪತ್ರೆಯಲ್ಲಿ ಶೋಧ ನಡೆಸಬೇಕಿರುವುದರಿಂದ 460ಕ್ಕೂ ಅಧಿಕ ಸಿಬ್ಬಂದಿಗಳು, ರೋಗಿಗಳು ಹಾಗೂ ಅವರ ಮನೆಯವರನ್ನು ಸಮೀಪದ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಗೊಳ್ಳಲು ಸೂಚಿಸಿತ್ತು.
ಆ ಕಟ್ಟಡದಲ್ಲಿ ವೈದ್ಯಕೀಯ ಚಿಕಿತ್ಸೆಯ ವ್ಯವಸ್ಥೆ ಇರದ ಕಾರಣ 7 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ