ಅಫ್ಘಾನಿಸ್ತಾನದ ಮಸೀದಿಯಲ್ಲಿ ಗುಂಡಿನ ದಾಳಿಗೆ 6 ಮಂದಿ ಮೃತ್ಯು

Update: 2024-04-30 16:29 GMT

Photo: NDtv

ಕಾಬೂಲ್: ಪಶ್ಚಿಮ ಅಫ್ಘಾನಿಸ್ತಾನದ ಶಿಯಾ ಮಸೀದಿಯಲ್ಲಿ ಬಂದೂಕುಧಾರಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 6 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ.

ಹೆರಾತ್ ಪ್ರಾಂತದ ಗುಝಾರಾ ಜಿಲ್ಲೆಯ ಮಸೀದಿಯಲ್ಲಿ ಸೋಮವಾರ ರಾತ್ರಿ ಗುಂಡಿನ ದಾಳಿ ನಡೆದಿದೆ. ಮಸೀದಿಯಲ್ಲಿ ಪ್ರಾರ್ಥನೆ ನಡೆಸುತ್ತಿದ್ದ 6 ಮಂದಿ ಸಾವನ್ನಪ್ಪಿದ್ದು ಓರ್ವ ಗಾಯಗೊಂಡಿದ್ದಾನೆ. ದಾಳಿ ನಡೆಸಿದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು ತನಿಖೆ ಮುಂದುವರಿದಿದೆ. ಯಾವುದೇ ಸಂಘಟನೆ ಸ್ಫೋಟದ ಹೊಣೆಯನ್ನು ವಹಿಸಿಲ್ಲ ಎಂದು ಅಫ್ಘಾನಿಸ್ತಾನದ ಆಂತರಿಕ ಸಚಿವಾಲಯದ ವಕ್ತಾರ ಅಬ್ದುಲ್ ಮತೀನ್ ಖಾನಿ ಹೇಳಿದ್ದಾರೆ.

ಶಿಯಾ ಮುಸ್ಲಿಮರ ಪ್ರಾರ್ಥನಾ ಮಂದಿರವನ್ನು ಗುರಿಯಾಗಿಸಿ ನಡೆದಿರುವ ದಾಳಿಯನ್ನು ಖಂಡಿಸುವುದಾಗಿ ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಝಾಯಿ ಟ್ವೀಟ್(ಎಕ್ಸ್) ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News