ಕದನವಿರಾಮ ಜಾರಿಯಲ್ಲಿರುವಾಗಲೇ 6 ಮಂದಿ ಫೆಲೆಸ್ತೀನೀಯರ ಹತ್ಯೆ: ವರದಿ

Update: 2023-11-26 15:06 GMT

Photo- PTI

ಗಾಝಾ: ರವಿವಾರ ಬೆಳಿಗ್ಗೆ ಆಕ್ರಮಿತ ಪಶ್ಚಿಮದಂಡೆಯಲ್ಲಿ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಬಾಲಕನ ಸಹಿತ 6 ಮಂದಿ ಹತರಾಗಿದ್ದು ಇತರ 6 ಮಂದಿ ಗಾಯಗೊಂಡಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಇಸ್ರೇಲ್-ಹಮಾಸ್ ನಡುವಿನ ಕದನವಿರಾಮ ಜಾರಿಯಲ್ಲಿರುವಾಗಲೇ ಈ ಘಟನೆ ನಡೆದಿದೆ. ಪಶ್ಚಿಮದಂಡೆಯ ಜೆನಿನ್ ನಗರದೊಳಗೆ ನುಗ್ಗಿದ ಇಸ್ರೇಲ್ ಪಡೆ ಅಲ್ಲಿರುವ ಸರಕಾರಿ ಆಸ್ಪತ್ರೆಗಳು, ರೆಡ್‍ಕ್ರೆಸೆಂಟ್ ಸೊಸೈಟಿಯ ಕೇಂದ್ರ ಕಚೇರಿಯನ್ನು ಸುತ್ತುವರಿದು ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ಬಾಲಕನ ಸಹಿತ 5 ಮಂದಿ ಮೃತಪಟ್ಟಿದ್ದು ಇತರ 6 ಮಂದಿ ಗಾಯಗೊಂಡಿದ್ದಾರೆ. ಸಮೀಪದ ಯಾತ್ಮಾ ಹಳ್ಳಿಯಲ್ಲಿ ಇಸ್ರೇಲ್ ಪಡೆ ನಡೆಸಿದ ಗುಂಡಿನ ದಾಳಿಯಲ್ಲಿ ಒಬ್ಬ ಫೆಲೆಸ್ತೀನ್ ಪ್ರಜೆ ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನಿಯನ್ ಆರೋಗ್ಯ ಇಲಾಖೆ ಹೇಳಿದೆ.

ಈ ವರದಿಯ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಇಸ್ರೇಲ್ ಸೇನೆಯ ವಕ್ತಾರರು ಪ್ರತಿಕ್ರಿಯೆ ನೀಡಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

Tags:    

Writer - ವಾರ್ತಾಭಾರತಿ

contributor

Editor - Thouheed

contributor

Byline - ವಾರ್ತಾಭಾರತಿ

contributor

Similar News