ಸಿರಿಯಾ ಮಾರುಕಟ್ಟೆಯಲ್ಲಿ ಬಾಂಬ್ ಸ್ಫೋಟ; 8 ಮಂದಿ ಸಾವು

Update: 2024-03-31 18:03 GMT

Photo : x/@SyriaCivilDef

ಬೈರೂತ್: ಉತ್ತರ ಸಿರಿಯಾದ ಮಾರುಕಟ್ಟೆಯಲ್ಲಿ ರವಿವಾರ ಬೆಳಿಗ್ಗೆ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ 8 ಮಂದಿ ಸಾವನ್ನಪ್ಪಿದ್ದು 23 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಅಲೆಪ್ಪೋ ಪ್ರಾಂತದ ಅಝಾಝ್ ನಗರದಲ್ಲಿನ ಜನಪ್ರಿಯ ಮಾರುಕಟ್ಟೆಯಲ್ಲಿ ಕಾರು ಬಾಂಬ್ ಸ್ಫೋಟಿಸಿದಾಗ ಕನಿಷ್ಟ 8 ಮಂದಿ ಸಾವನ್ನಪ್ಪಿದ್ದು ಇತರ 23 ಮಂದಿ ಗಾಯಗೊಂಡಿದ್ದಾರೆ. ಕೆಲವರು ಗಂಭೀರವಾಗಿ ಗಾಯಗೊಂಡಿದ್ದು ಸಾವಿನ ಸಂಖ್ಯೆ ಹೆಚ್ಚುವ ಸಾಧ್ಯತೆಯಿದೆ ಎಂದು ಮಾನವ ಹಕ್ಕುಗಳಿಗಾಗಿನ ಸಿರಿಯಾ ವೀಕ್ಷಕ ಏಜೆನ್ಸಿ ವರದಿ ಮಾಡಿದೆ.

ಮಾರುಕಟ್ಟೆಯಲ್ಲಿ ಜನಗಂಗುಳಿ ಹೆಚ್ಚಿದ್ದರಿಂದ ವ್ಯಾಪಕ ಸಾವು-ನೋವು ಸಂಭವಿಸಿದೆ. ಸ್ಫೋಟದಿಂದ ಭಾರೀ ಹಾನಿಯಾಗಿದ್ದು ಸಮೀಪದ ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳ ಮತ್ತು ರಕ್ಷಣಾ ತಂಡದವರನ್ನು ಸ್ಥಳದಲ್ಲಿ ನಿಯೋಜಿಸಲಾಗಿದ್ದು ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಫೋಟದ ಹೊಣೆಯನ್ನು ಇದುವರೆಗೆ ಯಾರೂ ವಹಿಸಿಲ್ಲ ಎಂದು ಅಧಿಕಾರಿಗಳನ್ನು ಉಲ್ಲೇಖಿಸಿ `ರಾಯ್ಟರ್ಸ್' ವರದಿ ಮಾಡಿದೆ. ಅರಬ್ ಜನಸಂಖ್ಯೆಯಿರುವ ಅಝಾಝ್ ನಗರವು ಟರ್ಕಿ ಬೆಂಬಲಿತ ಸಿರಿಯಾ ಬಂಡುಗೋರ ಗುಂಪಿನ ವಶದಲ್ಲಿದೆ. 

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News