ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಆಪ್‌ ಸ್ಪರ್ಧೆ: ಪಂಜಾಬ್ ಮುಖ್ಯಮಂತ್ರಿ

Update: 2024-01-24 13:54 GMT

ಪಂಜಾಬ್‌ ಸಿಎಂ ಭಗವಂತ್‌ ಮಾನ್ (PTI)

ಹೊಸದಿಲ್ಲಿ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಮ್ಮ ತೃಣಮೂಲ ಕಾಂಗ್ರೆಸ್‌ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ  ಘೋಷಿಸಿದ ಬೆನ್ನಲ್ಲೇ ಆಮ್‌ ಆದ್ಮಿ ಪಕ್ಷ ಕೂಡ ತಾನು ಪಂಜಾಬ್‌ನ ಎಲ್ಲಾ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಹೇಳುವ ಮೂಲಕ ವಿಪಕ್ಷಗಳ ʼಇಂಡಿಯಾʼ ಮೈತ್ರಿಕೂಟಕ್ಕೆ ದೊಡ್ಡ ಹೊಡೆತ ನೀಡಿದೆ.

“ಪಂಜಾಬ್‌ನ 13 ಲೋಕಸಭಾ ಕ್ಷೇತ್ರಗಳಿಗೆ 40 ಅಭ್ಯರ್ಥಿಗಳ ಪಟ್ಟಿಯನ್ನು ಆಪ್‌ ತಯಾರಿಸಿದೆ, ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸುವ ಮುನ್ನ ಸಮೀಕ್ಷೆ ನಡೆಸಲಾಗುತ್ತಿದೆ,” ಎಂದು ಪಂಜಾಬ್‌ ಸಿಎಂ ಭಗವಂತ್‌ ಮಾನ್ ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಯಾವುದೇ ಹೊಂದಾಣಿಕೆಯಿಲ್ಲ, ರಾಷ್ಟ್ರಮಟ್ಟದಲ್ಲಿ ಯಾವುದೇ ಮೈತ್ರಿ ವಿಚಾರವನ್ನು ಚುನಾವಣೆ ನಂತರ ನಿರ್ಧರಿಸಲಾಗುವುದು ಎಂದು ಮಮತಾ ಬ್ಯಾನರ್ಜಿ ಇಂದು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News