ಕರಾಚಿಯಲ್ಲಿ ತುರ್ತು ಭೂಸ್ಪರ್ಷ ಮಾಡಿದ ಏರ್ ಇಂಡಿಯಾ ವಿಮಾನ

Update: 2023-10-15 17:44 GMT

Photo: PTI 

ಇಸ್ಲಮಾಬಾದ್ : ಪ್ರಯಾಣಿಕರೋರ್ವರು ಹಠಾತ್ ಅಸ್ವಸ್ಥರಾದ ಹಿನ್ನೆಲೆಯಲ್ಲಿ ದುಬೈಯಿಂದ ಅಮೃತ್ ಸರಕ್ಕೆ ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನ ಶನಿವಾರ ಪಾಕಿಸ್ತಾನದ ಕರಾಚಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಷ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುಬೈಯಿಂದ ಸ್ಥಳೀಯ ಕಾಲಮಾನ ಬೆಳಿಗ್ಗೆ 8:51ಕ್ಕೆ ಅಮೃತಸರಕ್ಕೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿದ್ದ ಪ್ರಯಾಣಿಕರೊಬ್ಬರು ಹಠಾತ್ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಹತ್ತಿರದ ಕರಾಚಿ ವಿಮಾನ ನಿಲ್ದಾಣದತ್ತ ವಿಮಾನವನ್ನು ತಿರುಗಿಸಿ ತುರ್ತು ಭೂಸ್ಪರ್ಷ ಮಾಡಲಾಗಿದೆ ಎಂದು ವರದಿ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News