ಪುಟಿನ್ ಭೇಟಿಯಾದ ಅಜಿತ್ ದೋವಲ್

Update: 2024-09-12 16:55 GMT

ಪುಟಿನ್ , ಅಜಿತ್ ದೋವಲ್ PC : X/@RusEmbIndia

ಮಾಸ್ಕೋ : ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಗುರುವಾರ ಸೈಂಟ್ ಪೀಟರ್ಸ್‍ಬರ್ಗ್‍ನಲ್ಲಿ ರಶ್ಯ ಅಧ್ಯಕ್ಷ ವ್ಲಾದಿಮಿರ್ ಪುಟಿನ್‍ರನ್ನು ಭೇಟಿ ಮಾಡಿರುವುದಾಗಿ ವರದಿಯಾಗಿದೆ.

ಸೈಂಟ್ ಪೀಟರ್ಸ್‍ಬರ್ಗ್‍ನಲ್ಲಿ ನಡೆಯುತ್ತಿರುವ ಬ್ರಿಕ್ಸ್ ಮತ್ತು ಬ್ರಿಕ್ಸ್ ಪ್ಲಸ್ ಉನ್ನತ ಮಟ್ಟದ ಭದ್ರತಾ ಅಧಿಕಾರಿಗಳ ಶೃಂಗಸಭೆಯ ನೇಪಥ್ಯದಲ್ಲಿ ಪುಟಿನ್‍ರನ್ನು ಭೇಟಿ ಮಾಡಿದ ದೋವಲ್, ಪ್ರಧಾನಿ ನರೇಂದ್ರ ಮೋದಿ ಕಳೆದ ವಾರ ಉಕ್ರೇನ್‍ಗೆ ನೀಡಿದ ಭೇಟಿಯ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಉಕ್ರೇನ್ ಅಧ್ಯಕ್ಷ ಝೆಲೆನ್‍ಸ್ಕಿ ಜತೆ ಪ್ರಧಾನಿ ನರೇಂದ್ರ ಮೋದಿ ನಡೆಸಿದ್ದ ಮಾತುಕತೆಯ ಬಗ್ಗೆ ದೋವಲ್ ರಶ್ಯ ಅಧ್ಯಕ್ಷರಿಗೆ ವಿವರಿಸಿದರು.

ಅಕ್ಟೋಬರ್ 22ರಂದು ಕಝಾನ್‍ನಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಯ ನೇಪಥ್ಯದಲ್ಲಿ ಪ್ರಧಾನಿ ಮೋದಿ ಜತೆ ದ್ವಿಪಕ್ಷೀಯ ಸಭೆ ನಡೆಸುವುದಾಗಿ ಪುಟಿನ್ ಪ್ರಸ್ತಾಪಿಸಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಹೇಳಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News