ಪನ್ನೂನ್ ಹತ್ಯೆಗೆ ಪ್ರಯತ್ನ ಆರೋಪ: ಭಾರತದ ತನಿಖೆಯ ಫಲಿತಾಂಶಕ್ಕೆ ಕಾಯುತ್ತಿದ್ದೇವೆ; ಅಮೆರಿಕ
Update: 2023-12-06 16:23 GMT
ವಾಷಿಂಗ್ಟನ್: ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ, ಖಾಲಿಸ್ತಾನ್ ಮುಖಂಡ ಗುರುಪತ್ವಂತ್ ಸಿಂಗ್ ಪನ್ನೂನ್ ಹತ್ಯೆಗೆ ನಡೆದ ಪ್ರಯತ್ನದಲ್ಲಿ ಭಾರತದ ಅಧಿಕಾರಿಯೊಬ್ಬರು ಶಾಮೀಲಾಗಿದ್ದಾರೆ ಎಂಬ ಆರೋಪದ ಬಗ್ಗೆ ಭಾರತ ಘೋಷಿಸಿರುವ ತನಿಖೆಯ ಫಲಿತಾಂಶಕ್ಕೆ ಕಾಯುತ್ತಿದ್ದೇವೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ವಕ್ತಾರ ಮ್ಯಾಥ್ಯೂ ಮಿಲ್ಲರ್ ಹೇಳಿದ್ದಾರೆ.
`ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವುದಾಗಿ ನಾವು ಭಾರತದ ವಿದೇಶಾಂಗ ಇಲಾಖೆಗೆ ಸ್ಪಷ್ಟಪಡಿಸಿದ್ದೇವೆ. ಆರೋಪದ ಬಗ್ಗೆ ತನಿಖೆ ನಡೆಸುವುದಾಗಿ ಅವರು ಹೇಳಿದ್ದಾರೆ ಮತ್ತು ಸಾರ್ವಜನಿಕವಾಗಿ ತನಿಖೆಯನ್ನು ಘೋಷಿಸಿದ್ದಾರೆ. ಈಗ ನಾವು ತನಿಖೆಯ ಫಲಿತಾಂಶವನ್ನು ಕಾಯುತ್ತಿದ್ದೇವೆ. ಕೆನಡಾದಲ್ಲಿ ಸಿಖ್ ಪ್ರತ್ಯೇಕತಾವಾದಿ ಹರ್ದೀಪ್ ಸಿಂಗ್ ನಿಜ್ಜಾರ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಸಹಕರಿಸುವಂತೆಯೂ ಭಾರತವನ್ನು ಆಗ್ರಹಿಸಲಾಗಿದೆ' ಎಂದು ಮಿಲ್ಲರ್ ಸುದ್ಧಿಗೋಷ್ಟಿಯಲ್ಲಿ ಹೇಳಿದ್ದಾರೆ.