ಕಾಂಗೋ: ಧಾರಾಕಾರ ಮಳೆ, ಪ್ರವಾಹಕ್ಕೆ ಕನಿಷ್ಠ 30 ಬಲಿ

Update: 2025-04-07 23:00 IST
ಕಾಂಗೋ: ಧಾರಾಕಾರ ಮಳೆ, ಪ್ರವಾಹಕ್ಕೆ ಕನಿಷ್ಠ 30 ಬಲಿ

Photo by: Samy Ntumba Shambuyi/AP

  • whatsapp icon

ಕಿನ್ಶಾಸ: ಕಾಂಗೋ ಗಣರಾಜ್ಯದ ರಾಜಧಾನಿ ಕಿನ್ಶಾಸದಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದ ಕನಿಷ್ಠ 30 ಮಂದಿ ಸಾವನ್ನಪ್ಪಿದ್ದು ವ್ಯಾಪಕ ನಾಶ-ನಷ್ಟ ಸಂಭವಿಸಿರುವುದಾಗಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಶುಕ್ರವಾರ ತಡರಾತ್ರಿಯಿಂದ ಶನಿವಾರ ರಾತ್ರಿವರೆಗೆ ನಿರಂತರ ಸುರಿದ ಮಳೆಯಿಂದಾಗಿ ಪ್ರಮುಖ ರಸ್ತೆಗಳು ಪ್ರವಾಹದ ನೀರಿನಲ್ಲಿ ಮುಳುಗಿದ್ದು ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಹಲವು ಮನೆಗಳು, ಕಟ್ಟಡಗಳು ಕುಸಿದಿದ್ದು ಪ್ರಾಥಮಿಕ ಮಾಹಿತಿಯ ಪ್ರಕಾರ 30 ಮಂದಿ ಸಾವನ್ನಪ್ಪಿದ್ದು ಇತರ ಹಲವರು ಗಾಯಗೊಂಡಿದ್ದಾರೆ. ಕಿನ್ಶಾಸ ನಗರವನ್ನು ವಿಮಾನ ನಿಲ್ದಾಣಕ್ಕೆ ಸಂಪರ್ಕಿಸುವ ಪ್ರಮುಖ ಹೆದ್ದಾರಿಯಲ್ಲಿ ಪ್ರವಾಹದ ನೀರು ಹರಿಯುತ್ತಿರುವುದರಿಂದ ಸಂಚಾರ ಅಸ್ತವ್ಯಸ್ತಗೊಂಡಿದೆ. ಕಿನ್ಶಾಸದ ಪೂರ್ವದಲ್ಲಿರುವ ಡೆಬೊನ್‍ಹೊಮ್ ಜಿಲ್ಲೆಯಲ್ಲಿ ಹಲವು ವಾಹನಗಳು ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿವೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆಯ ಅಧಿಕಾರಿಗಳನ್ನು ಉಲ್ಲೇಖಿಸಿ ಎಎಫ್‍ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News