ಬಾಂಗ್ಲಾ | ಉದ್ಯೋಗ ಮೀಸಲಾತಿ ವಿರೋಧಿಸಿ ವಿದ್ಯಾರ್ಥಿಗಳ ಪ್ರತಿಭಟನೆ, 100ಕ್ಕೂ ಹೆಚ್ಚು ಮಂದಿಗೆ ಗಾಯ

Update: 2024-07-16 15:04 GMT

PC : NDTV

ಢಾಕಾ : ಸರಕಾರಿ ಉದ್ಯೋಗದಲ್ಲಿ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭ ನಡೆದ ಘರ್ಷಣೆಯಲ್ಲಿ 100ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಜನವರಿಯಲ್ಲಿ ನಡೆದ ಚುನಾವಣೆಯಲ್ಲಿ 4ನೇ ಬಾರಿ ಪ್ರಧಾನಿಯಾಗಿ ಆಯ್ಕೆಗೊಂಡ ಬಳಿಕ ಶೇಖ್ ಹಸೀನಾ ಸರಕಾರಕ್ಕೆ ಎದುರಾಗಿರುವ ಪ್ರಥಮ ಸವಾಲು ಇದಾಗಿದೆ. ಸ್ವಾತಂತ್ರ್ಯ ಹೋರಾಟಗಾರರ ವಂಶಸ್ಥರಿಗೆ ಸರಕಾರಿ ಉದ್ಯೋಗದಲ್ಲಿ 30% ಮೀಸಲಾತಿಯನ್ನು ರದ್ದುಗೊಳಿಸುವಂತೆ ಬಾಂಗ್ಲಾದೇಶದ ಸುಪ್ರೀಂಕೋರ್ಟ್ ಆದೇಶಿಸಿತ್ತು. ಆದರೆ ಇದಕ್ಕೆ ಸಂಬಂಧಿಸಿದ ಮತ್ತೊಂದು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ಮೀಸಲಾತಿಯನ್ನು ಮರು ಜಾರಿಗೊಳಿಸುವಂತೆ ಜುಲೈ ಪ್ರಥಮ ವಾರದಲ್ಲಿ ಸರಕಾರಕ್ಕೆ ಸೂಚಿಸಿತ್ತು.

ಇದನ್ನು ವಿರೋಧಿಸಿ ಮೀಸಲಾತಿ ವಿರೋಧಿ ವಿದ್ಯಾರ್ಥಿಗಳ ಗುಂಪು ಹಾಗೂ ಪ್ರಧಾನಿ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ವಿದ್ಯಾರ್ಥಿ ಘಟಕದ ಸದಸ್ಯರ ನಡುವೆ ಜಟಾಪಟಿ ನಡೆದಿದ್ದು ಹಾಕಿ ಸ್ಟಿಕ್, ಕಬ್ಬಿಣದ ರಾಡ್ನಿಂ ದ ಬಡಿದಾಡಿಕೊಂಡಿದ್ದಾರೆ. ಹಲವು ಕ್ಯಾಂಪಸ್ಗ ಳಲ್ಲಿ ಘರ್ಷಣೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ವಿದ್ಯಾರ್ಥಿಗಳ ಬೇಡಿಕೆಯನ್ನು ಈಡೇರಿಸಲು ಪ್ರಧಾನಿ ರವಿವಾರ ನಿರಾಕರಿಸಿದ ಬಳಿಕ ಪ್ರತಿಭಟನೆ ತೀವ್ರಗೊಂಡಿದೆ.

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ವಿವಿಗಳಲ್ಲಿ ಪ್ರತಿಭಟನೆ, ರ್ಯಾ ಲಿ ಮುಂದುವರಿಯಲಿದೆ. ಇದು ಕೇವಲ ವಿದ್ಯಾರ್ಥಿಗಳ ಪ್ರತಿಭಟನೆ ಮಾತ್ರವಲ್ಲ. ಇದನ್ನು ದಮನಿಸಲು ಸರಕಾರದ ಉನ್ನತ ಮಟ್ಟದಿಂದ ಪ್ರಚೋದನೆಯಿದೆ. ಆದ್ದರಿಂದ ಜನಸಾಮಾನ್ಯರು ರಸ್ತೆಗಿಳಿದು ಪ್ರತಿಭಟಿಸಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿ ಸಂಘಟನೆಗಳು ಹೇಳಿಕೆ ನೀಡಿವೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News