ನ್ಯಾಯಾಧೀಶರಿಗೆ ಭಾರತದಲ್ಲಿ ತರಬೇತಿ ಕಾರ್ಯಕ್ರಮ ರದ್ದುಗೊಳಿಸಿದ ಬಾಂಗ್ಲಾದೇಶ

Update: 2025-01-05 16:36 GMT

ಮಹಮ್ಮದ್ ಯೂನಸ್ (Photo: PTI)

ಢಾಕಾ: ಭಾರತದಲ್ಲಿ 50 ನ್ಯಾಯಾಧೀಶರು ಮತ್ತು ನ್ಯಾಯಾಂಗ ಅಧಿಕಾರಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಬಾಂಗ್ಲಾದೇಶದ ಮಧ್ಯಂತರ ಸರಕಾರ ರವಿವಾರ ರದ್ದುಗೊಳಿಸಿದೆ.

ಒಂದು ದಿನದ ತರಬೇತಿ ಕಾರ್ಯಕ್ರಮ ಫೆಬ್ರವರಿಯಲ್ಲಿ ನಿಗದಿಪಡಿಸಲಾಗಿತ್ತು.

ಫೆಬ್ರವರಿ 10ರಂದು ಮಧ್ಯಪ್ರದೇಶದ `ರಾಷ್ಟ್ರೀಯ ನ್ಯಾಯಾಂಗ ಅಕಾಡೆಮಿ ಮತ್ತು ರಾಜ್ಯ ನ್ಯಾಯಾಂಗ ಅಕಾಡೆಮಿ'ಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಲಿದೆ. ಭಾರತ ಸರಕಾರ ಈ ಕಾರ್ಯಕ್ರಮದ ವೆಚ್ಚ ಭರಿಸುತ್ತದೆ ಎಂದು ಬಾಂಗ್ಲಾದ ಮಾಧ್ಯಮಗಳು ವರದಿ ಮಾಡಿದ್ದವು.

`ಈ ಅಧಿಸೂಚನೆಯನ್ನು ರದ್ದುಗೊಳಿಸಲಾಗಿದೆ' ಎಂದು ಕಾನೂನು ಸಚಿವಾಲಯದ ಅಧಿಕಾರಿಯೊಬ್ಬರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News