ಬಾಂಗ್ಲಾದೇಶ: ಕರ್ಫ್ಯೂ ಸಡಿಲಿಕೆ

Update: 2024-07-24 16:38 GMT

PC : PTI 

ಢಾಕಾ : ಉದ್ಯೋಗ ಮೀಸಲಾತಿ ವಿರೋಧಿಸಿ ಬಾಂಗ್ಲಾದೇಶದಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಜಾರಿಗೊಳಿಸಿರುವ ಕರ್ಫ್ಯೂವನ್ನು ಸಡಿಲಿಸಲಾಗಿದ್ದು ಬ್ಯಾಂಕ್‌ಗಳು, ಗಾರ್ಮೆಂಟ್ ಫ್ಯಾಕ್ಟರಿಗಳು ಕಾರ್ಯಾರಂಭ ಮಾಡಿವೆ ಎಂದು ಎಎಫ್‌ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಕಳೆದ ವಾರ ನಡೆದ ಹಿಂಸಾಚಾರದಲ್ಲಿ ಕನಿಷ್ಟ 186 ಮಂದಿ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಈ ಮಧ್ಯೆ, ಸೂಕ್ಷ್ಮ ಪ್ರದೇಶಗಳಲ್ಲಿ ಸಾವಿರಾರು ಯೋಧರು ಗಸ್ತು ತಿರುಗುತ್ತಿದ್ದಾರೆ. ಬುಧವಾರದಿಂದ ದೇಶದೆಲ್ಲೆಡೆ ಪರಿಸ್ಥಿತಿ ಶಾಂತವಾಗಿದ್ದು ಯಾವುದೇ ಹೊಸ ಹಿಂಸಾಚಾರದ ಘಟನೆ ವರದಿಯಾಗಿಲ್ಲ. ರಾಜಧಾನಿ ಢಾಕಾದಲ್ಲಿ ಸ್ಟಾಕ್ ಎಕ್ಸ್ಚೇಂಜ್‌ಗಳು, ಬ್ಯಾಂಕ್‌ಗಳು ಮತ್ತು ಕೆಲವು ಸರಕಾರಿ ಕಚೇರಿಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಕಾರ್ಯನಿರ್ವಹಿಸಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News