ನಾಳೆ ಬಾಂಗ್ಲಾ ಮಧ್ಯಂತರ ಸರಕಾರ ಪ್ರಮಾಣ ವಚನ ಸ್ವೀಕಾರ

Update: 2024-08-07 16:35 GMT

 ಮುಹಮ್ಮದ್ ಯೂನಸ್

ಢಾಕಾ : ನೊಬೆಲ್ ಪ್ರಶಸ್ತಿ ವಿಜೇತ ಮುಹಮ್ಮದ್ ಯೂನಸ್ ನೇತೃತ್ವದ ಮಧ್ಯಂತರ ಸರಕಾರ ಇಂದು(ಆಗಸ್ಟ್ 8) ಪ್ರಮಾಣ ವಚನ ಸ್ವೀಕರಿಸಲಿದೆ ಎಂದು ಸೇನಾ ಮುಖ್ಯಸ್ಥ ಜ| ವಕಾರ್ ಉಝ್ಝಮಾನ್ ಬುಧವಾರ ಹೇಳಿದ್ದಾರೆ.

ಗುರುವಾರ ರಾತ್ರಿ 8 ಗಂಟೆಗೆ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ. ಯೂನುಸ್ ನೇತೃತ್ವದ ಸಲಹಾ ಸಮಿತಿ 15 ಸದಸ್ಯರನ್ನು ಹೊಂದಿರುತ್ತದೆ. ಮಧ್ಯಂತರ ಸರಕಾರವನ್ನು ಮುನ್ನಡೆಸಲು ದೇಶಕ್ಕೆ ಬಂದಿರುವ ಯೂನುಸ್ ಪ್ರಜಾಪ್ರಭುತ್ವ ಪ್ರಕ್ರಿಯೆಯ ಮೂಲಕ ದೇಶವನ್ನು ಮುನ್ನಡೆಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಪ್ರತ್ಯೇಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಯೂನುಸ್ ಶಾಂತಿ ಕಾಪಾಡುವಂತೆ ಜನತೆಗೆ ಮನವಿ ಮಾಡಿದರು. ಹಿಂಸೆಯ ಮಾರ್ಗವನ್ನು ಹಿಡಿದರೆ ಎಲ್ಲವೂ ನಾಶವಾಗಲಿದೆ ಎಂದವರು ಹೇಳಿದ್ದಾರೆ.

ವ್ಯಾಪಕ ಪ್ರತಿಭಟನೆ, ಘರ್ಷಣೆ, ಹಿಂಸಾಚಾರದ ಬಳಿಕ ಶೇಖ್ ಹಸೀನಾ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಭಾರತಕ್ಕೆ ಪಲಾಯನ ಮಾಡಿದ ಬಳಿಕ 84 ವರ್ಷದ ಯೂನುಸ್ರನ್ನು ಬಾಂಗ್ಲಾದೇಶದ ಅಧ್ಯಕ್ಷ ಮುಹಮ್ಮದ್ ಶಹಾಬುದ್ದೀನ್ ಮಧ್ಯಂತರ ಸರಕಾರದ ಮುಖ್ಯಸ್ಥರನ್ನಾಗಿ ನೇಮಿಸಿದ್ದರು. 

Tags:    

Writer - ವಾರ್ತಾಭಾರತಿ

contributor

Editor - Mushaveer

contributor

Byline - ವಾರ್ತಾಭಾರತಿ

contributor

Similar News