ಜೈಲಿನಲ್ಲಿರುವ ಮಾಜಿ ಪ್ರಧಾನಿ ಖಾಲಿದಾ ಝಿಯಾ ಬಿಡುಗಡೆಗೆ ಬಾಂಗ್ಲಾದೇಶ ಅಧ್ಯಕ್ಷರ ಆದೇಶ
Update: 2024-08-05 16:58 GMT
ಢಾಕಾ : ಬಾಂಗ್ಲಾದೇಶದ ಅಧ್ಯಕ್ಷ ಮುಹಮ್ಮದ್ ಶಹಾಬುದ್ದೀನ್ ಅವರು ಜೈಲಿನಲ್ಲಿದ್ದ ಮಾಜಿ ಪ್ರಧಾನಿ ಮತ್ತು ವಿರೋಧ ಪಕ್ಷದ ಪ್ರಮುಖ ನಾಯಕಿ ಖಾಲಿದಾ ಝಿಯಾ ಅವರನ್ನು ಬಿಡುಗಡೆ ಮಾಡಲು ಸೋಮವಾರ ಆದೇಶಿಸಿದ್ದಾರೆ ಎಂದು ಎಎಫ್ಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಶೇಖ್ ಹಸೀನಾ ಅವರನ್ನು ಪದಚ್ಯುತಗೊಳಿಸಿ ಮಿಲಿಟರಿ ಅಧಿಕಾರ ವಹಿಸಿಕೊಂಡ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.
ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ದೇಶ ಬಿಟ್ಟು ಪಲಾಯನ ಮಾಡಿದ ನಂತರ ಅಧ್ಯಕ್ಷ ಶಹಾಬುದ್ದೀನ್ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ (ಬಿಎನ್‌ಪಿ) ಅಧ್ಯಕ್ಷೆ ಬೇಗಂ ಖಾಲಿದಾ ಝಿಯಾ ಅವರನ್ನು ತಕ್ಷಣವೇ ಬಂಧ ಮುಕ್ತಗೊಳಿಸಲು ಸರ್ವಾನುಮತದಿಂದ ನಿರ್ಧರಿಸಲಾಗಿದೆ ಎಂದು ಅಧ್ಯಕ್ಷರ ಕಚೇರಿ ಬಿಡುಗಡೆ ಮಾಡಿರುವ ಪತ್ರಿಕಾ ಪ್ರಕಟಣೆ ತಿಳಿಸಿದೆ.