ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ ವಿರುದ್ಧ ಬಂಧನ ವಾರಂಟ್ ಜಾರಿ

Update: 2024-10-17 15:23 GMT

ಶೇಖ್ ಹಸೀನಾ | PTI

ಢಾಕ : ವಿದ್ಯಾರ್ಥಿಗಳ ವ್ಯಾಪಕ ಪ್ರತಿಭಟನೆಯ ಬಳಿಕ ಆಗಸ್ಟ್ನಲ್ಲಿ ಪದಚ್ಯುತಗೊಂಡಿದ್ದ ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಬಾಂಗ್ಲಾದೇಶದ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿರುವುದಾಗಿ ಎಎಫ್ಪಿ ಸುದ್ದಿಸಂಸ್ಥೆ ವರದಿ ಮಾಡಿದೆ.

ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ಮಾಡಿದ್ದ ಶೇಖ್ ಹಸೀನಾ ಆ ಬಳಿಕ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಅವರನ್ನು ಬಂಧಿಸಿ ನವೆಂಬರ್ 18ರಂದು ನ್ಯಾಯಾಲಯದ ಎದುರು ಹಾಜರುಪಡಿಸಲು ನ್ಯಾಯಾಲಯ ಆದೇಶಿಸಿದೆ. ಜುಲೈ ಮತ್ತು ಆಗಸ್ಟ್ನ ಪ್ರತಿಭಟನೆ ಸಂದರ್ಭ ಹತ್ಯಾಕಾಂಡ ಮತ್ತು ಮಾನವೀಯತೆಯ ವಿರುದ್ಧ ಅಪರಾಧ ಎಸಗಿದವರು ಹಸೀನಾ ಅವರ ನಿಯಂತ್ರಣದಲ್ಲಿದ್ದರು ಎಂದು ಬಾಂಗ್ಲಾದೇಶದ ಅಂತರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಮುಖ್ಯ ಪ್ರಾಸಿಕ್ಯೂಟರ್ ಮುಹಮ್ಮದ್ ತಾಜುಲ್ ಇಸ್ಲಾಂ ಹೇಳಿದ್ದಾರೆ.

ಮಾನವೀಯತೆಯ ವಿರುದ್ಧದ ಅಪರಾಧ ಪ್ರಕರಣದಡಿ ಹಸೀನಾ ವಿರುದ್ಧ ಬಂಧನ ವಾರಂಟ್ ಜಾರಿಯಾಗಿರುವುದಾಗಿ ವರದಿಯಾಗಿದೆ. ಹಸೀನಾ ಅವರ 15 ವರ್ಷದ ಆಳ್ವಿಕೆಯಲ್ಲಿ ಅವರ ರಾಜಕೀಯ ವಿರೋಧಿಗಳ ಸಾಮೂಹಿಕ ಬಂಧನ ಮತ್ತು ಕಾನೂನುಬಾಹಿರ ಹತ್ಯೆಗಳು ಸೇರಿದಂತೆ ವ್ಯಾಪಕವಾದ ಮಾನವ ಹಕ್ಕುಗಳ ಉಲ್ಲಂಘನೆಯ ವರದಿಗಳಿವೆ. ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಒಬೈದುಲ್ ಖಾದರ್ ಹಾಗೂ ಇತರ 44 ಮಂದಿಯ ವಿರುದ್ಧವೂ ಬಂಧನ ವಾರಂಟ್ ಜಾರಿಯಾಗಿರುವುದಾಗಿ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News