ಬೈರೂತ್ | ಇಸ್ರೇಲ್ ದಾಳಿಯಲ್ಲಿ ಕನಿಷ್ಠ 6 ಮಂದಿ ಮೃತ್ಯು

Update: 2024-11-13 16:23 GMT

ಸಾಂದರ್ಭಿಕ ಚಿತ್ರ | PC : aljazeera.com

ಬೈರೂತ್ : ಲೆಬನಾನ್ ರಾಜಧಾನಿ ಬೈರೂತ್‍ನ ದಕ್ಷಿಣದಲ್ಲಿರುವ ಜನದಟ್ಟಣೆಯ ಪ್ರದೇಶದ ಮೇಲೆ ಬುಧವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 6 ಮಂದಿ ಹತರಾಗಿರುವುದಾಗಿ ಲೆಬನಾನ್‌ ನ ಆರೋಗ್ಯ ಇಲಾಖೆ ಹೇಳಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ ಅರಾಮೌನ್ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 6 ಮಂದಿ ಸಾವನ್ನಪ್ಪಿದ್ದು ಇತರ 15 ಮಂದಿ ಗಾಯಗೊಂಡಿದ್ದಾರೆ. ಹಲವು ಕಟ್ಟಡಗಳಿಗೆ ಹಾನಿಯಾಗಿದ್ದು ಸಾವು-ನೋವಿನ ಪ್ರಮಾಣ ಹೆಚ್ಚುವ ಸಾಧ್ಯತೆಯಿದೆ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ.

ಈ ಮಧ್ಯೆ, ಬೈರುತ್‍ನ ದಕ್ಷಿಣ ಉಪನಗರಗಳ ಕೆಲವು ಪ್ರದೇಶಗಳ ನಿವಾಸಿಗಳು ಸ್ಥಳಾಂತರಗೊಳ್ಳುವಂತೆ ಇಸ್ರೇಲ್ ಸೂಚಿಸಿದೆ. `ಹಿಜ್ಬುಲ್ಲಾಗಳಿಗೆ ಸಂಬಂಧಿಸಿದ ಸೌಲಭ್ಯಗಳು ಹಾಗೂ ನೆಲೆಗಳ ಸಮೀಪ ಇರುವವರು ತಕ್ಷಣ ಸ್ಥಳಾಂತರಗೊಳ್ಳಬೇಕು. ಈ ಪ್ರದೇಶದಲ್ಲಿ ಮುಂದಿನ ದಿನಗಳಲ್ಲಿ ಸೇನಾ ಕಾರ್ಯಾಚರಣೆ ನಡೆಯಲಿದೆ ಎಂದು ಇಸ್ರೇಲ್ ಸೇನೆಯ ವಕ್ತಾರರು ಸಾಮಾಜಿಕ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News