2024 ರ ಅಮೆರಿಕ ಚುನಾವಣೆ | ಅಧಿಕೃತವಾಗಿ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರ ನಡೆದ ಜೋ ಬೈಡನ್

Update: 2024-07-21 23:53 IST
2024 ರ ಅಮೆರಿಕ ಚುನಾವಣೆ | ಅಧಿಕೃತವಾಗಿ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರ ನಡೆದ ಜೋ ಬೈಡನ್

ಜೋ ಬೈಡನ್ | PC : PTI

  • whatsapp icon

ವಾಷಿಂಗ್ಟನ್ : ಅಧ್ಯಕ್ಷ ಜೋ ಬೈಡೆನ್ ಅವರು ತಮ್ಮ ಅಧ್ಯಕ್ಷೀಯ ಚುನಾವಣೆಯ ಪ್ರಚಾರವನ್ನು ಕೊನೆಗೊಳಿಸುವುದಾಗಿ ರವಿವಾರ ಘೋಷಿಸಿದ್ದಾರೆ. ಆ ಮೂಲಕ ಅವರು ಅಧಿಕೃತವಾಗಿ ಅಮೆರಿಕ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನದ ಸ್ಪರ್ಧೆಯಿಂದ ಹೊರ ನಡೆದಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಜೋ ಬೈಡೆನ್ ಅವರು, "ನನ್ನ ಪಕ್ಷ ಮತ್ತು ದೇಶದ ಹಿತದೃಷ್ಟಿಯಿಂದ ನನ್ನ ಉಳಿದ ಅವಧಿಗೆ ಅಧ್ಯಕ್ಷನಾಗಿ ನನ್ನ ಕರ್ತವ್ಯಗಳನ್ನು ಪೂರೈಸುವುದರ ಮೇಲೆ ಮಾತ್ರ ಗಮನಹರಿಸುತ್ತೇನೆ. ನನ್ನ ನಿರ್ಧಾರದ ಬಗ್ಗೆ ವಾರದ ಬಳಿಕ ರಾಷ್ಟ್ರದೊಂದಿಗೆ ಹೆಚ್ಚು ವಿವರವಾಗಿ ಮಾತನಾಡುತ್ತೇನೆ” ಎಂದು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Naufal

contributor

Byline - ವಾರ್ತಾಭಾರತಿ

contributor

Similar News