ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್‌ ಸ್ಫೋಟ: ರಷ್ಯಾದ ಪರಮಾಣು ರಕ್ಷಣಾ ಪಡೆ ಮುಖ್ಯಸ್ಥ ಸಾವು

Update: 2024-12-17 09:13 GMT

ಇಗೊರ್ ಕಿರಿಲೋವ್ (Photo credit:X/@RT_com)

ಮಾಸ್ಕೋ: ರಷ್ಯಾದ ಪರಮಾಣು ರಕ್ಷಣಾ ಪಡೆಗಳ ಉಸ್ತುವಾರಿ ವಹಿಸಿದ್ದ ಹಿರಿಯ ಸೇನಾಧಿಕಾರಿ ಎಲೆಕ್ಟ್ರಿಕ್ ಸ್ಕೂಟರ್‌ನಲ್ಲಿ ಅಡಗಿಸಿಟ್ಟಿದ್ದ ಬಾಂಬ್‌ ಸ್ಪೋಟಗೊಂಡು ಸಾವನ್ನಪ್ಪಿದ್ದಾರೆ ಎಂದು ರಷ್ಯಾದ ತನಿಖಾ ಸಮಿತಿ ತಿಳಿಸಿದೆ.

ವಿಕಿರಣಶಾಸ್ತ್ರ, ರಾಸಾಯನಿಕ ಮತ್ತು ಜೈವಿಕ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿದ್ದ ಲೆಫ್ಟಿನೆಂಟ್ ಜನರಲ್ ಇಗೊರ್ ಕಿರಿಲೋವ್ ಅವರು ಮಂಗಳವಾರ ರಿಯಾಜಾನ್ಸ್ಕಿ ಪ್ರಾಸ್ಪೆಕ್ಟ್‌ನಲ್ಲಿರುವ ಅಪಾರ್ಟ್ಮೆಂಟ್ ಹೊರಗೆ ನಡೆದ ಸ್ಪೋಟದಲ್ಲಿ ಮೃತಪಟ್ಟಿದ್ದಾರೆ.

ಬಾಂಬ್‌ ಸ್ಪೋಟದಿಂದ "ರಷ್ಯಾದ ಒಕ್ಕೂಟದ ಸಶಸ್ತ್ರ ಪಡೆಗಳ ವಿಕಿರಣ, ರಾಸಾಯನಿಕ ಮತ್ತು ಜೈವಿಕ ರಕ್ಷಣಾ ಪಡೆಗಳ ಮುಖ್ಯಸ್ಥ ಇಗೊರ್ ಕಿರಿಲೋವ್ ಮತ್ತು ಅವರ ಸಹಾಯಕ ಮೃತಪಟ್ಟಿದ್ದಾರೆ" ಎಂದು ತನಿಖಾ ಸಮಿತಿ ತಿಳಿಸಿದೆ.

ಸ್ಫೋಟಕ ಸಾಧನವು ಸುಮಾರು 300 ಗ್ರಾಂ ಟಿಎನ್‌ಟಿಗೆ ಸಮಾನವಾದ ಸಾಮರ್ಥ್ಯವನ್ನು ಹೊಂದಿತ್ತು ಎಂದು ರಷ್ಯಾದ TASS ಸುದ್ದಿ ಸಂಸ್ಥೆ ವರದಿ ಮಾಡಿದೆ.

ಎಪ್ರಿಲ್ 2017 ರಲ್ಲಿ ರಷ್ಯಾದ ಪರಮಾಣು ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ನೇಮಕವಾಗಿದ್ದ ಕಿರಿಲೋವ್ ಅವರನ್ನು, ಉಕ್ರೇನ್‌ ಯುದ್ಧದಲ್ಲಿನ ಅವರ ಪಾತ್ರಕ್ಕಾಗಿ ಯುಕೆ ಮತ್ತು ಕೆನಡಾ ಸೇರಿದಂತೆ ಹಲವಾರು ದೇಶಗಳಿಂದ ನಿರ್ಬಂಧಗಳಿಗೆ ಒಳಗಾಗಿದ್ದರು.

ಬಾಂಬ್ ಅನ್ನು ರಿಮೋಟ್ ಮೂಲಕ ಸ್ಫೋಟಿಸಲಾಗಿದ್ದು, ಸ್ಪೋಟಕವು ಸರಿಸುಮಾರು 300 ಗ್ರಾಂ ಟಿಎನ್‌ಟಿಗೆ ಸಮಾನವಾದ ಶಕ್ತಿಯನ್ನು ಹೊಂದಿತ್ತು ಎಂದು ರಷ್ಯಾದ ಸರ್ಕಾರಿ ಸುದ್ದಿ ಸಂಸ್ಥೆ ಟಾಸ್ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Irshad Venur

contributor

Byline - ವಾರ್ತಾಭಾರತಿ

contributor

Similar News