ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್. ಗವಾಯಿ ನೇಮಕ
Update: 2025-04-29 20:50 IST

ಬಿ.ಆರ್. ಗವಾಯಿ | PTI
ಹೊಸದಿಲ್ಲಿ: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರನ್ನು ಸುಪ್ರೀಂ ಕೋರ್ಟ್‌ನ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅಧಿಕೃತವಾಗಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಕೇಂದ್ರ ಕಾನೂನು ಸಚಿವಾಲಯ ಅಧಿಸೂಚನೆ ಹೊರಡಿಸಿದೆ. ಮೇ 14ರಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನು 2025ರ ಮೇ14ರಿಂದ ಜಾರಿಗೆ ಬರುವಂತೆ ಭಾರತದ ಮುಂದಿನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿದ್ದಾರೆ.
ಹಾಲಿ ಸಿಜೆಐ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರು ಮೇ 13ರಂದು ನಿವೃತ್ತರಾಗಲಿದ್ದಾರೆ.