ಭಾರತಕ್ಕೆ ಬರುವ ಪ್ರಯಾಣಿಕರಿಗೆ ಹೆಚ್ಚುವರಿ ತಪಾಸಣೆ ಕ್ರಮ ಹಿಂಪಡೆದ ಕೆನಡಾ

Update: 2024-11-23 16:13 GMT

ಸಾಂದರ್ಭಿಕ ಚಿತ್ರ | PC : ANI

ಒಟ್ಟಾವ : ಅಚ್ಚರಿಯ ಬೆಳವಣಿಗೆಯಲ್ಲಿ ಕೆನಡಾದಿಂದ ಭಾರತಕ್ಕೆ ವಿಮಾನದ ಮೂಲಕ ಪ್ರಯಾಣಿಸುವವರಿಗೆ ವಿಧಿಸಲಾಗಿದ್ದ ಹೆಚ್ಚುವರಿ ತಪಾಸಣಾ ಕ್ರಮವನ್ನು ಕೆನಡಾ ಸರಕಾರ ಹಿಂಪಡೆದಿರುವುದಾಗಿ ವರದಿಯಾಗಿದೆ.

ಕೆನಡಾದಿಂದ ಭಾರತಕ್ಕೆ ತೆರಳುವ ಪ್ರಯಾಣಿಕರು ಹೆಚ್ಚಿನ ಭದ್ರತಾ ತಪಾಸಣೆ ಕ್ರಮಗಳನ್ನು ಎದುರಿಸಬೇಕಾಗುತ್ತದೆ. ಹೆಚ್ಚಿನ ಮುನ್ನೆಚ್ಚರಿಕೆ ಕ್ರಮವಾಗಿ ಈ ವ್ಯವಸ್ಥೆ ಜಾರಿಗೊಳಿಸಿರುವುದಾಗಿ ಕೆನಡಾದ ಸಾರಿಗೆ ಸಚಿವರು ಮಂಗಳವಾರ ಹೇಳಿಕೆ ನೀಡಿದ್ದರು. ಇದೀಗ ಈ ಸೂಚನೆಯನ್ನು ಹಿಂಪಡೆದಿರುವುದಾಗಿ ಸಾರಿಗೆ ಸಚಿವರು ಹೇಳಿದ್ದು ಹೆಚ್ಚಿನ ಮಾಹಿತಿ ನೀಡಿಲ್ಲ ಎಂದು ಸಿಬಿಎಸ್ ನ್ಯೂಸ್ ವರದಿ ಮಾಡಿದೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News