ಚೀನಾ: ಮಾರುಕಟ್ಟೆಯಲ್ಲಿ ಅಗ್ನಿದುರಂತ

Update: 2025-01-04 15:54 GMT

PC : X/@Weathermonitors

ಬೀಜಿಂಗ್: ಉತ್ತರ ಚೀನಾದ ತರಕಾರಿ ಮಾರುಕಟ್ಟೆಯಲ್ಲಿ ಸಂಭವಿಸಿದ ಅಗ್ನಿದುರಂತದಲ್ಲಿ 8 ಮಂದಿ ಸಾವನ್ನಪ್ಪಿದ್ದು ಇತರ 15 ಮಂದಿ ಗಾಯಗೊಂಡಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಬೀಜಿಂಗ್‍ನ ವಾಯವ್ಯದಲ್ಲಿರುವ ಜಾಂಗ್‍ಜಿಯಾಕೌ ನಗರದ ಲಿಗುವಾಂಗ್ ತರಕಾರಿ ಮಾರುಕಟ್ಟೆಯಲ್ಲಿ ಶನಿವಾರ ಬೆಳಿಗ್ಗೆ 8:40ಕ್ಕೆ (ಸ್ಥಳೀಯ ಕಾಲಮಾನ) ಬೆಂಕಿ ಕಾಣಿಸಿಕೊಂಡಿದ್ದು 2 ಗಂಟೆಯ ಕಾರ್ಯಾಚರಣೆಯಲ್ಲಿ ಬೆಂಕಿಯನ್ನು ನಿಯಂತ್ರಿಸಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು ಬೆಂಕಿ ದುರಂತಕ್ಕೆ ಕಾರಣದ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾಡಳಿತದ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ.

Tags:    

Writer - ವಾರ್ತಾಭಾರತಿ

contributor

Editor - Musaveer

contributor

Byline - ವಾರ್ತಾಭಾರತಿ

contributor

Similar News