ಅಮೆರಿಕ ಸುಂಕಗಳಿಂದ ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ ಗಂಭೀರ ಪರಿಣಾಮ: ಚೀನಾ
Update: 2025-04-13 00:01 IST

Photo Credit | PTI
ಬೀಜಿಂಗ್: ಅಮೆರಿಕದ ಸುಂಕಗಳು ಬಡ ದೇಶಗಳ ಮೇಲೆ ಗಂಭೀರ ಹಾನಿಯುಂಟು ಮಾಡುತ್ತದೆ ಎಂದು ಚೀನಾದ ವಾಣಿಜ್ಯ ಇಲಾಖೆ ಸಚಿವ ವಾಂಗ್ ವೆಂಟಾವೊ ವಿಶ್ವ ವ್ಯಾಪಾರ ಸಂಸ್ಥೆಯ ಮುಖ್ಯಸ್ಥರಿಗೆ ತಿಳಿಸಿದ್ದಾರೆ ಎಂದು ಇಲಾಖೆಯ ಹೇಳಿಕೆ ತಿಳಿಸಿದೆ.
ಅಮೆರಿಕದ ಪರಸ್ಪರ ಸುಂಕಗಳು ಅಭಿವೃದ್ಧಿಶೀಲ ರಾಷ್ಟ್ರಗಳ ಮೇಲೆ, ವಿಶೇಷವಾಗಿ ಕಡಿಮೆ ಅಭಿವೃದ್ಧಿ ಹೊಂದಿದ ದೇಶಗಳ ಮೇಲೆ ಗಂಭೀರ ಹಾನಿ ಉಂಟು ಮಾಡುತ್ತದೆ ಮತ್ತು ಮಾನವೀಯ ಬಿಕ್ಕಟ್ಟಿಗೆ ಪ್ರಚೋದನೆ ನೀಡಬಹುದು ಎಂದು ವಿಶ್ವ ವ್ಯಾಪಾರ ಸಂಸ್ಥೆಯ ಮುಖ್ಯಸ್ಥ ಎಂಗೋಜಿ ಒಕೊಂಜೊ-ಇವೆಲಾ ಜೊತೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ ವಾಂಗ್ ಮಾಹಿತಿ ನೀಡಿರುವುದಾಗಿ ಹೇಳಿಕೆ ತಿಳಿಸಿದೆ.